113
ಸುಳ್ಯ : ದ.ಕ.ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಪರಿಸರ ಹಾಗೂ ಸುತ್ತಮುತ್ತಲು ಭಾರೀ ಮಳೆಯಾಗುತ್ತಿದೆ. ಪರಿಣಾಮ ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯು ಉಕ್ಕಿ ಹರಿಯುತ್ತಿದೆ.
ದರ್ಪಣ ತೀರ್ಥ ನದಿಯು ಪ್ರವಾಹದ ರೀತಿಯಲ್ಲಿ ಉಕ್ಕಿಹರಿದ ಪರಿಣಾಮ ಶ್ರೀ ಆದಿಸುಬ್ರಹ್ಮಣ್ಯ ದೇವಸ್ಥಾನದ ಹೊರಾಂಗಣಕ್ಕೆ ನೀರು ಪ್ರವೇಶಿಸಿದೆ. ಆದಿಸುಬ್ರಹ್ಮಣ್ಯದ ಕೆಲವು ಅಂಗಡಿಮುಂಗಟ್ಟುಗಳಿಗೂ ಮಳೆ ನೀರು ನುಗ್ಗಿದೆ.