ಶೋಭಾ ಕರಂದ್ಲಾಜೆ ಕುರಿತು ಮಾತನಾಡುವ ನೈತಿಕತೆ ಹೆಬ್ಬಾಳ್ಕರ್‌ಗೆ ಇಲ್ಲ – ಶ್ರೀನಿಧಿ ಹೆಗ್ಡೆ

ಉಡುಪಿ : ಜಿಲ್ಲಾ ಉಸ್ತುವಾರಿ ಸಚಿವರಾಗಿ ತಿಂಗಳಿಗೆ ಒಂದು ಬಾರಿಯಾದರೂ ಜಿಲ್ಲೆಗೆ ಭೇಟಿ ನೀಡದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಮುಡಾ ಹಗರಣದ ಕುರಿತು ಮಾತನಾಡಿರುವ ಶೋಭಾ ಕರಂದ್ಲಾಜೆ ಕುರಿತು ಮಾತನಾಡುವ ಯಾವ ನೈತಿಕತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇದೆ ಎಂದು ಬಿಜೆಪಿ ಮುಖಂಡ ಶ್ರೀನಿಧಿ ಹೆಗ್ಡೆ ಪ್ರಶ್ನಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಇಲಾಖೆಯಲ್ಲಿ ಗೃಹಲಕ್ಷ್ಮಿ ಹಣವನ್ನು ಪ್ರತಿ ಮನೆಗೂ ತಲುಪಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಗೆ ಹೇಳಿಕೊಳ್ಳುವಂಥ ಅನುದಾನ ತಾರದೆ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ಇಲ್ಲದೆ ಇರುವ ಕಾರಣ ಮಲತಾಯಿ ಧೋರಣೆ ತೋರಿರುವುದು ಜಿಲ್ಲೆಯ ಜನರಿಗೆ ತಿಳಿದಿರುವ ಸಂಗತಿಯಾಗಿದೆ.

ಜಿಲ್ಲೆಯಲ್ಲಿ ಹವಾಮಾನ ವೈಪರೀತ್ಯದಿಂದ ಎಡೆಬಿಡದೆ ಸುರಿದ ಮಳೆಯಿಂದ ಜಿಲ್ಲೆಯ ಜನರ ಕಷ್ಟಗಳಿಗೆ ಸ್ಪಂದಿಸದೆ, ಜನರ ಕೈಗೂ ಸಿಗದೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೂ ತಲೆಗೆಡಿಸಿಕೊಳ್ಳದ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಆಗಿ ಮುಂದುವರಿಯಲು ಯಾವ ನೈತಿಕತೆಯೂ ಇಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದನ್ನು ಮನಗಂಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಹತಾಷ ಮನೋಭಾವದಿಂದ ಈ ರೀತಿ ವರ್ತಿಸುತ್ತಿದ್ದಾರೆ ಎಂದು ಶ್ರೀನಿಧಿ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !