ಉಡುಪಿ : ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ(ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶಕ್ಕೆ 2025ರ ಕಲಂ 2(ಎಫ್)ರನ್ವಯ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಯವರನ್ನು ನೋಂದಣಿ ಪ್ರಾಧಿಕಾರಿಯನ್ನಾಗಿ ನೇಮಿಸಲಾಗಿದೆ.
ಅದರಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವಂತಹ ಎಲ್ಲಾ ಲೇವಾದೇವಿದಾರರು ಈ ಆಧ್ಯಾದೇಶ ಪ್ರಾರಂಭವಾದ ದಿನಾಂಕದಿಂದ 30 ದಿನಗಳೊಳಗಾಗಿ ನೋಂದಣಿ ಪ್ರಾಧಿಕಾರಿಯ ಮುಂದೆ ನೋಂದಣಿಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ಅಧ್ಯಾದೇಶಕ್ಕೆ 2025ರಲ್ಲಿ ವಿವರಿಸಿರುವ ನಿಯಮಗಳನ್ನು ಉಲ್ಲಂಘಿಸಿ ಕಾರ್ಯಾಚರಿಸುವ ಲೇವಾದೇವಿದಾರರ ವಿರುದ್ಧ ದೂರಗಳನ್ನು ದಾಖಲಿಸಲು ಜಿಲ್ಲಾಧಿಕಾರಿ ಕಛೇರಿಯಲ್ಲಿ ಹಾಗೂ ಪೊಲೀಸ್ ಕಂಟ್ರೋಲ್ ರೂಂ(ಜಿಲ್ಲಾಧಿಕಾರಿ ಕಛೇರಿ ಸಹಾಯವಾಣಿ -0820-2574802/ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ-112) ಮೂಲಕ ಸಾರ್ವಜನಿಕ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ಸಾರ್ವಜನಿಕರು ಮುಕ್ತವಾಗಿ ದೂರುಗಳನ್ನು ದಾಖಲಿಸಿ, ತಮಗೆ ಉಂಟಾಗಿರುವ ತೊಂದರೆ ಕುರಿತು ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.