ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆಗೆ ಹೈಕೋರ್ಟ್ ಜಾಮೀನು ಮಂಜೂರು

ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ(44) ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿ ಆದೇಶಿಸಿದೆ.

ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮಾರ್ಚ್ 4ರಂದು ತಿರಸ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಆರೋಪಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಆರೋಪಿ ದಿಲೀಪ್‌ ಹೆಗ್ಡೆಗೆ ಜಾಮೀನು ನೀಡಿ ಆದೇಶಿಸಿದೆ. ಆರೋಪಿ ಪರವಾಗಿ ನ್ಯಾಯವಾದಿ ನಿಶ್ಚಿತ್ ಕುಮಾರ್ ಶೆಟ್ಟಿ ವಾದ ಮಂಡಿಸಿದ್ದಾರೆ.

2024ರ ಅ.20ರಂದು ಬಾಲಕೃಷ್ಣ ಪೂಜಾರಿ ಎಂಬವರನ್ನು ಅವರ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಕೊಲೈಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಅ.25ರಂದು ಅಜೆಕಾರು ಪೊಲೀಸರು ಬಂಧಿಸಿದ್ದರು.

Related posts

ಕರ್ನಾಟಕ ಲಲಿತ ಕಲಾ ಅಕಾಡೆಮಿಗೆ ಸಹ ಸದಸ್ಯರಾಗಿ ಆಸ್ಟ್ರೋ ಮೋಹನ್ ನೇಮಕ

ಕೆಎಂಸಿ ಉದ್ಯೋಗಿಯ ಮಾಂಗಲ್ಯ ಸರ ಎಗರಿಸಿದ ಆರೋಪಿ ಅರೆಸ್ಟ್

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಏಷ್ಯಾದ ಮೊದಲ ಮಾಮಾ ಅನ್ನಿ ಹೈ-ಫಿಡೆಲಿಟಿ ಬರ್ತಿಂಗ್ ಸಿಮ್ಯುಲೇಟರ್ ಪರಿಚಯ