ಮಲ್ಪೆ : ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳಾದ ಪಾರ್ವತಿ ಮತ್ತು ಲೀಲಾ ಅವರನ್ನು ಬಿಡುಗಡೆಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ.
ಬಂಧನ ಪ್ರಶ್ನಿಸಿ ಆರೋಪಿಗಳು ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇಬ್ಬರು ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಇನ್ನೋರ್ವ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಹಂತದಲ್ಲಿದೆ. ಈಗಾಗಲೇ ಪ್ರಕರಣದ ಪ್ರಮುಖ ಆರೋಪಿಗಳಾದ ಲಕ್ಷ್ಮೀ, ಶಿಲ್ಪ ಹಾಗೂ ಸುಂದರ್‌ಗೆ ಹೈಕೋರ್ಟ್‌ನಲ್ಲಿ ಜಾಮೀನು ಮಂಜೂರಾಗಿತ್ತು.