ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಮಂಗಳೂರು : ನಗರದ ರಸ್ತೆಯಲ್ಲಿ ನಮಾಝ್ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ‌ ಪ್ರಚೋದನಕಾರಿ ಸಂದೇಶ ಹಾಕಿರುವುದಕ್ಕೆ ವಿಶ್ವ‌ ಹಿಂದೂ ಪರಿಷತ್ ವಿಭಾಗ ಸಹಸಂಚಾಲಕ ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಶರಣ್ ಪಂಪ್‌ವೆಲ್ ವಿರುದ್ಧ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ‌ಸಂಹಿತೆಯ ಕಲಂ 153(ಎ), 506 ರಂತೆ ಪ್ರಕರಣ ದಾಖಲಾಗಿತ್ತು. ಶರಣ್ ಪಂಪ್‌ವೆಲ್ ಪರ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.

Related posts

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಭಕ್ತರಿಂದ 1.5 ಲಕ್ಷ ಚೆಂಡು ಮಲ್ಲಿಗೆ ಸಮರ್ಪಣೆ

ಗರ್ಭಧರಿಸಿದ್ದ ಗೋವಿನ ಹತ್ಯೆಗೈದು ಕರುವನ್ನು ನದಿಗೆ ಎಸೆದ ಗೋಕಳ್ಳರು