ಹೆದ್ದಾರಿ ಅವ್ಯವಸ್ಥೆ – ಆತ್ರಾಡಿಯಲ್ಲಿ ಮನೆಗಳಿಗೆ ಕೃತಕ ನೆರೆ ನೀರು ನುಗ್ಗಿ ಅವಾಂತರ ಸೃಷ್ಟಿ

ಉಡುಪಿ : ಮಲ್ಪೆ-ಮೊಳಕಾಲ್ಮೂರು ಹೆದ್ದಾರಿಯ ಆತ್ರಾಡಿಯಲ್ಲಿ ಸತತ ಮಳೆಯಿಂದಾಗಿ ಮನೆಗಳಿಗೆ ಕೃತಕ ನೆರೆ ನೀರು ನುಗ್ಗಿದ್ದು ಅವಾಂತರ ಸೃಷ್ಡಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದಾಗಿ ಇಲ್ಲಿ ಕೃತಕ ನೆರೆ ಬಂದಿದ್ದು ನೀರು ಹರಿದು ಹೋಗಲು ಜಾಗವಿಲ್ಲದೆ ಮನೆಗಳಿಗೆ ನುಗ್ಗಿದೆ.

ಅವ್ಯವಸ್ಥೆ ಜೊತೆಗೆ ಅಪೂರ್ಣ ಹೆದ್ದಾರಿ ಕಾಮಗಾರಿಯಿಂದಾಗಿ ಈ ಘಟನೆ ಸಂಭವಿಸಿದ್ದು ಮನೆಯ ಒಳಗೆಲ್ಲ ನೀರು ತುಂಬಿಕೊಂಡಿದ್ದರಿಂದ ಮನೆಯವರು ಒದ್ದಾಡುವಂತಾಗಿದೆ. ಹೆದ್ದಾರಿ ಕಾಮಗಾರಿ ಸಂದರ್ಭವೇ ಇಲ್ಲಿನ ನಿವಾಸಿಗಳು ಸಮರ್ಪಕ ಒಳಚರಂಡಿ ವ್ಯವಸ್ಥೆಗೆ ಒತ್ತಾಯಿಸುತ್ತಿದ್ದರು. ಆದರೆ ಹೆದ್ದಾರಿ ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಇಲ್ಲಿಯ ಜನರು ತೊಂದರೆ ಅನುಭವಿಸಬೇಕಾಗಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ