ಬೈಪಾಸ್ ತೆಂಕಿಲದಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡ ಕುಸಿತ, ರಸ್ತೆ ಸಂಪೂರ್ಣ ಬಂದ್

ಪುತ್ತೂರು : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಶುಕ್ರವಾರ ನಸುಕಿನ ಜಾವದ ವೇಳೆ ಗುಡ್ಡ ಕುಸಿದಿದೆ. ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡಕುಸಿಯುತ್ತಲೇ ಇದ್ದು ಇದೀಗ ಭಾರಿ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ. ಈಗಾಗಲೇ ನಗರಸಭೆ ಅಧಿಕಾರಿಗಳು, ಪೊಲೀಸರು ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್