ಉಡುಪಿ : ಬ್ರಹ್ಮಾವರ ಠಾಣೆ ವ್ಯಾಪ್ತಿಯ ಮಾಬುಕಳ ಸೇತುವೆ ಬಳಿ ಟಿಪ್ಪರೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮತ್ತೋರ್ವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಮ್ತಾಜ್ (44) ಮೃತ ಮಹಿಳೆ. ಮಮ್ತಾಜ್‌ರನ್ನು ಪರಿಚಿತರು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಬಾರ್ಕೂರಿನಿಂದ ಆಕಾಶವಾಣಿ ಮಾರ್ಗವಾಗಿ, ಮಾಬುಕಳ ಸೇತುವೆ ಬಳಿ ಬರುತ್ತಿದ್ದಾಗ ಅತಿವೇಗದಿಂದ ಬಂದ ಟಿಪ್ಪರ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಸ್ಕೂಟರ್‌ನಲ್ಲಿದ್ದ ಇಬ್ಬರು ನೆಲಕ್ಕೆ ಬಿದ್ದು ತೀವ್ರ ಗಾಯಗೊಂಡಿದ್ದರು. ಬಳಿಕ ಸಹಸವಾರೆ ಮುಮ್ತಾಜ್ ಸಾವನ್ನಪ್ಪಿದ್ದಾರೆ. ಟಿಪ್ಪರ್ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದು ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.