ಶಿವಪಾಡಿ ವೈಭವಕ್ಕೆ ಗೃಹ ಸಚಿವರಿಗೆ ಆಹ್ವಾನ

ಉಡುಪಿ : ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಐತಿಹಾಸಿಕ ಶಿವಪಾಡಿ ವೈಭವ ಕಾರ್ಯಕ್ರಮಕ್ಕೆ ರಾಜ್ಯದ ಗೃಹ ಸಚಿವರು ಹಾಗೂ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ್‌ರವರನ್ನು ಶಿವಪಾಡಿ ಉಮಾಮಹೇಶ್ವರ ದೇಗುಲದ ಆಡಳಿತ ಮೊಕ್ತೇಸರರು ಹಾಗೂ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಇದರ ಉಪಾಧ್ಯಕ್ಷರಾದ ಮಹೇಶ್ ಠಾಕೂರ್ ರವರು ಭೇಟಿಯಾಗಿ ಆಹ್ವಾನಿಸಿದರು.

ಫೆಬ್ರವರಿ 26ರಂದು ನಡೆಯಲಿರುವ ಸಮಾರೋಪ ಸಮಾರಂಭದ ಕಾರ್ಯಕ್ರಮಕ್ಕೆ ಆಗಮಿಸುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಮುಖ್ಯಸ್ಥರಾದ ಪ್ರತಾಪ್ ರೆಡ್ಡಿ, ಪ್ರಸಾದ್ ಪಾಟೀಲ್, ಇನ್ಫೋಸಿಸ್ ಹೆಚ್.ಆರ್. ವಿಕ್ರಮ್ ಸಾಮಂತ್ ಉಪಸ್ಥಿತರಿದ್ದರು.

Related posts

ರಂಗನಪಲ್ಕೆಯ ಡಾ. ಬಿ. ಆರ್. ಅಂಬೇಡ್ಕರ್ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

1 ಕೋಟಿ ಅನುದಾನದಲ್ಲಿ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ನಿರ್ಮಾಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಲಾನ್ಯಾಸ

ಬಸ್ಸು ಮಾಲಕರಿಂದ ಟೋಲ್ ಲೂಟಿ ವಿರುದ್ಧ ಪ್ರತಿಭಟನೆ