ಕುಂದಾಪುರ : ಸೇನಾಪುರದ ಬಳಿ ಹೆಜ್ಜೇನು ದಾಳಿಯ ಪರಿಣಾಮವಾಗಿ ಮೂವರು ಗಾಯಗೊಂಡು, ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಹೆಮ್ಮಾಡಿಯ ನಿವಾಸಿಯಾಗಿರುವ ಯೂಸುಫ್ ಸಾಹೇಬ್ (62) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಗುಜರಿ ವ್ಯಾಪಾರವನ್ನು ಮಾಡಿಕೊಂಡಿದ್ದ ಅವರು ಬಗ್ವಾಡಿಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಏಕಾಏಕಿಯಾಗಿ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.