ಮಾರ್ಚ್ 4 ಮತ್ತು 5ರಂದು ಬಿಸಿಯೂಟ ನೌಕರರ ಅಹೋರಾತ್ರಿ ಹೋರಾಟ

ಉಡುಪಿ : ರಾಜ್ಯ ಸರಕಾರ ಮಾರ್ಚ್ ಮೊದಲ ವಾರದಲ್ಲಿ ಮಂಡಿಸುವ ಬಜೆಟ್‌ನಲ್ಲಿ ಬಿಸಿಯೂಟ ನೌಕರರ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಇದೇ ಮಾರ್ಚ್ 4 ಮತ್ತು 5ರಂದು ರಾಜ್ಯಾದ್ಯಂತ ಅಹೋರಾತ್ರಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಅಕ್ಷರ ದಾಸೋಹ ನೌಕರರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಸಿಯೂಟ ನೌಕರರು ಹಲವು ವರ್ಷಗಳಿಂದ ವೇತನ ಹೆಚ್ಚಳಕ್ಕಾಗಿ ಸರಕಾರವನ್ನು ಒತ್ತಾಯಿಸುತಿದ್ದರೂ ಈವರೆಗೆ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಮಾರ್ಚ್ 4 ಮತ್ತು 5ರಂದು ಬಿಸಿಯೂಟ ನೌಕರರ ರಾಜ್ಯ ಮಟ್ಟದ ಅಹೋರಾತ್ರಿ ಹೋರಾಟಕ್ಕೆ ನಿಶ್ಚಯಿಸಲಾಗಿದೆ ಎಂದು ಅಕ್ಷರ ದಾಸೋಹ ನೌಕರರ ಸಂಘ ತಿಳಿಸಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ