ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ

ಬೈಂದೂರು : ಬೈಂದೂರು ತಾಲ್ಲೂಕು ನಾಗೂರು ಉಡುಪರ ಹಿತ್ತಲಿನ ತೋಟದಲ್ಲಿ ಇರುವ ಸಿಹಿ ನೀರಿನ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿದೆ.

ಸ್ಥಳೀಯರು ಅದನ್ನು ನೋಡಿ ಹೌಹಾರಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಮೊಸಳೆಗಳ ಕಾಣಿಸುವುದು ಅಪರೂಪ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿಗಳು ಕೋಳಿ ಮಾಂಸ ಹಾಕಿ ಮೊಸಳೆ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಮೊಸಳೆ ಈ ಭಾಗದಲ್ಲಿ ತೇಲಿ ಬಂದಿರಬಹುದೆಂದು ಶಂಕೆ ವ್ಯಕ್ತವಾಗುತ್ತಿದೆ.

ಮೊಸಳೆ ಬೃಹತ್ ಗಾತ್ರದ್ದಾಗಿದ್ದು, ಸ್ಥಳೀಯ ಜನರ ಪರಿಸರದಲ್ಲಿ ಹೆಚ್ಚಿದ ಆತಂಕವನ್ನು ಉಂಟುಮಾಡಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ