ಟ್ಯಾಂಕರಿನಿಂದ ಹೈಡ್ರಾಲಿಕ್ ಅನಿಲ ಸೋರಿಕೆ

ಮಂಗಳೂರು : ಕೋಟೆಕಾರ್‌ನ ಉಚ್ಚಿಲದಲ್ಲಿ ಕಾರವಾರದಿಂದ ಕೊಚ್ಚಿಯತ್ತ ಹೈಡ್ರೋಕ್ಲೋರಿಕ್ ಅನಿಲ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ವಾಹನದಲ್ಲಿ ಸೋರಿಕೆ ಉಂಟಾಗಿದೆ.

ಜಿಲ್ಲಾಡಳಿತ ಹಾಗೂ ತಹಶೀಲ್ದಾರ್ ಅವರ ಸೂಚನೆ ಮೇರೆಗೆ ಅಗ್ನಿಶಾಮಕ ದಳ, ರಾಜ್ಯ ವಿಪತ್ತು ಪಡೆ (ಎಸ್‌ಡಿಆರ್‌ಎಫ್) ಹಾಗೂ ಬಿಎಎಸ್‌ಎಫ್ ತಂಡ ನಿರಂತರ ಕಾರ‍್ಯಾಚರಣೆ ನಡೆಸುವ ಮೂಲಕ ಟ್ಯಾಂಕರಿನಲ್ಲಿದ್ದ 33,000 ಲೀ.(ಐಬಿಸಿ) ಅನ್ನು ಬೇರೆ ಟ್ಯಾಂಕರ್‌ಗೆ ವರ್ಗಾಯಿಸಲಾಗುತ್ತಿದ್ದು, ಈಗಾಗಲೇ ಅರ್ಧದಷ್ಟು ಕಾರ್ಯಾಚರಣೆ ಮುಗಿದಿದೆ.

ಇಂದು ಮಧ್ಯಾಹ್ನ 12.30 ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66 ಆಗಿ ಕೊಚ್ಚಿಗೆ ತೆರಳುತ್ತಿದ್ದ ಟ್ಯಾಂಕರಿನಲ್ಲಿ ಹೈಡ್ರಾಲಿಕ್ ಅನಿಲ ಸೋರಿಕೆ ಆರಂಭವಾಗಿದೆ. ಕೋಟೆಕಾರು ಉಚ್ಚಿಲ ಸಮೀಪ ಟ್ಯಾಂಕರ್ ಚಾಲಕ ಬೇರೆ ವಾಹನದ ಚಾಲಕರ ಸೂಚನೆ ಮೇರೆಗೆ ಟ್ಯಾಂಕರ್ ಅನ್ನು ರಸ್ತೆಬದಿಯಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಟ್ಯಾಂಕರಿನೊಳಕ್ಕಿದ್ದ ಹೈಡ್ರೋಕ್ಲೋರಿಕ್ ಅನಿಲ ಸೋರಿಕೆಯಾಗುವುದನ್ನು ಗಮನಿಸಿ, ಸ್ಥಳೀಯ ಉಳ್ಳಾಲ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ಮತ್ತು ಉಳ್ಳಾಲ ಠಾಣೆಯ ಪೊಲೀಸರು ಆಗಮಿಸಿ ಅಗ್ನಿ ಶಾಮಕ ದಳ ಠಾಣೆಗೆ ಮಾಹಿತಿ ನೀಡಿದ್ದಾರೆ. ಸೋರಿಕೆ ನಿರಂತರವಾಗುತ್ತಿದ್ದ ನಡುವೆ ಎಂಸೀಲ್ ಹಾಕಿ ಅನಿಲವನ್ನು ತಡೆಯುವ ಪ್ರಯತ್ನ ನಡೆಯಿತು‌. ಆದರೆ ಅದು ಯಶಸ್ವಿಯಾಗಲಿಲ್ಲ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸೋರಿಕೆ ಉಂಟಾಗುತ್ತಲೇ ಇತ್ತು. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪುಟ್ಟರಾಜು, ಕೋಟೆಕಾರು ಗ್ರಾಮಕರಣಿಕೆ ನಯನಾ ಸೇರಿದಂತೆ ಕಂದಾಯ ಇಲಾಖೆ ಭೇಟಿ ಕೊಟ್ಟು, ಅಪಾಯದ ಮುನ್ಸೂಚನೆ ಅರಿತು ಜಿಲ್ಲಾಡಳಿತಕ್ಕೆ ಮಾಹಿತಿ ರವಾನಿಸಿದ್ದಾರೆ.

ಜಿಲ್ಲಾಡಳಿತದಿಂದ ರಾಸಾಯನಿಕ ಅವಘಢಗಳಿಗೆ ಸಂಬಂಧಿಸಿದ ತುರ್ತು ಕಾರ‍್ಯಾಚರಣೆ ಕೈಗೊಳ್ಳುವ ಎಂಸಿಎಫ್, ಬಿಎಎಸ್‌ಎಫ್ ಹಾಗೂ ಎಸ್‌ಡಿಆರ್‌ಎಫ್‌ಗೆ ಸೂಚನೆ ನೀಡಲಾಯಿತು. ಅನಿಲ ಸ್ಥಳಾಂತರಿಸುವ ಎಸ್‌ಎಪಿಎ ಮಾದರಿ ಬಿಎಎಸ್‌ಎಫ್ ಸಂಸ್ಥೆಯಲ್ಲಿ ಮಾತ್ರ ಇರುವುದರಿಂದ ಅವರಿಂದಲೇ ಕಾರ‍್ಯಾಚರಣೆ ನಡೆಸಲಾಗಿದೆ. ಟ್ಯಾಂಕರಿನೊಳಕ್ಕೆ ಒಟ್ಟು 33,000 ಲೀ. ಅನಿಲವಿತ್ತು.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ