ನಾನು ದೇವೇಗೌಡ ಕುಟುಂಬ ಖರೀದಿ ಮಾಡುತ್ತೇನೆ ಅಂತ ಹೇಳಿಲ್ಲ – ಮಂಗಳೂರಿನಲ್ಲಿ ಜಮೀರ್ ಅಹ್ಮದ್ ಪ್ರತಿಕ್ರಿಯೆ

ಮಂಗಳೂರು : ನಾನು ದೇವೇಗೌಡ ಕುಟುಂಬ ಖರೀದಿ ಮಾಡುತ್ತೇನೆ ಅಂತ ಹೇಳಿಲ್ಲ, ಕುಮಾರಸ್ವಾಮಿಯವರು ಮುಸ್ಲಿಂ ನನಗೆ ಬೇಕಾಗಿಲ್ಲ ಅಂತ ಹೇಳಿದ್ರು. ಈ ಹಿನ್ನೆಲೆಯಲ್ಲಿ ನಾನು ಹೇಳಿಕೆ ನೀಡಿದ್ದು.

ಮುಸ್ಲಿಂ ಓಟ್ ಬೇಡ ಅಂತ ದುಡ್ಡು ಕೊಟ್ಟು ಖರೀದಿ ಮಾಡುತ್ತಿದ್ದೀರಿ? ಅಲ್ವಾ ಎಷ್ಟು ಸರಿ ಅಂತ ಕೇಳಿದ್ದೆ? ಮುಸ್ಲಿಂ ಪಂಚರ್ ಹಾಕುವವರು, ವೆಲ್ಡಿಂಗ್ ಮಾಡುವವರು ಅಂತಾ ಹೇಳಿದ್ದಾರೆ. ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ? ಯೂ ಟರ್ನ್ ಕುಮಾರಸ್ವಾಮಿ ಅಂತ ಅವರ ಹೆಸರಿದೆ. ಯಾವಾಗ ಬೇಕಾದರೂ ಹೇಗೆ ಬೇಕಾದರೂ ಟರ್ನ್ ಮಾಡುತ್ತಾರೆ ಅವರು ವೈಯಕ್ತಿಕವಾಗಿ ಕುಮಾರಸ್ವಾಮಿಗೆ ಹೇಳಿರುವುದು. ಒಕ್ಕಲಿಗರ ಬಗ್ಗೆ ನನಗೆ ಗೌರವ ಇದೆ
ಒಕ್ಕಲಿಗರಿಗೆ ಯಾವ ಹೇಳಿಕೆ ನೀಡಿಲ್ಲ, ನಾನು ಜನತಾದಳಕ್ಕೆ ಬರಲು ಕಾರಣ ಆದಿಚುಂಚನಗಿರಿ ಸ್ವಾಮೀಜಿ. ನಾನು ಮಠದ ಹುಡುಗ, ಆದಿ ಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು. ಬೇಕಿದ್ರೆ ಸ್ವಾಮೀಜಿ ಬಳಿ ಕೇಳಲು ಹೇಳಿ. ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ, ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವ.

ಕುಮಾರಸ್ವಾಮಿ ಅವರಲ್ಲಿ ಕೇಳಿ ಎಂದು ಸಚಿವ ಜಮೀರ್ ಅಹ್ಮದ್ ಅವರು ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು..

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ