ಪೆಟ್ರೋಲ್ ದರ ಇಳಿಸದಿದ್ದರೆ ಅಧಿವೇಶನ ನಡೆಸಲು ಬಿಡುವುದಿಲ್ಲ : ಸುನಿಲ್ ಕುಮಾರ್ ಎಚ್ಚರಿಕೆ

ಉಡುಪಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಇಂದು ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜನಪ್ರತಿನಿಧಿಗಳು ಕಾರ್ಯಕರ್ತರು ಭಾಗಿಯಾದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಶೀಘ್ರ ನಿಮ್ಮ ತೀರ್ಮಾನವನ್ನು ವಾಪಸ್ ಪಡೆಯಿರಿ. ಇಲ್ಲದಿದ್ದಲ್ಲಿ ಅಧಿವೇಶನದಲ್ಲಿ ಈ ವಿಷಯ ಚರ್ಚೆ ಮಾಡುವುದರ ಜೊತೆಗೆ ಅಧಿವೇಶನವನ್ನು ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ದ ಹರಿಹಾಯ್ದ ಸುನೀಲ್ ಕುಮಾರ್, ಬೆಲೆ ಏರಿಕೆ ಮಾಡಿ ಉಳಿದ ರಾಜ್ಯಗಳಿಗೆ ಸರಿಸಮಾನವಾಗಿದೆ ಎಂದು ಸಮರ್ಥನೆ ಮಾಡಿಕೊಳ್ಳುತ್ತಿದ್ದೀರಿ. ಇದು ನಾಚಿಕೆಗೇಡಿನ ಸಂಗತಿ. ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ 94 ರೂಪಾಯಿ ಇದೆ, ಗುಜರಾತ್‌ನಲ್ಲಿ 95 ಇದೆ, ಹರಿಯಾಣದಲ್ಲಿ 94 ರೂಪಾಯಿ ಇದೆ. ಈ ರಾಜ್ಯಗಳು ನಮಗೆ ಮೇಲ್ಪಂಕ್ತಿಯಾಗಬೇಕು. ತೆಲಂಗಾಣದಲ್ಲಿ ರೂ. 107 ಇದೆ, ಈ ಕಾರಣಕ್ಕೋಸ್ಕರ ಕರ್ನಾಟಕದಲ್ಲಿ ರೂ. 103 ಇದೆ. ಕಾಂಗ್ರೆಸ್ ಆಳ್ವಿಕೆ ಇರುವ ಎಲ್ಲಾ ರಾಜ್ಯಗಳಲ್ಲಿ ಬೆಲೆ ಏರಿಕೆ ಆಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಚೊಂಬು ಪ್ರದರ್ಶಿಸಿದಿರಿ, ಇವತ್ತು ರಾಜ್ಯದಲ್ಲಿ ಜನರಿಗೆ ಚೊಂಬು ಕೊಟ್ಟಿದ್ದೀರಿ. ತಕ್ಷಣ ಬೆಲೆ ಏರಿಕೆ ವಾಪಾಸ್ ಪಡೆಯಿರಿ. ಇಲ್ಲದಿದ್ದರೆ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್