ಅಕ್ರಮ ಜಾನುವಾರು ಸಾಗಾಟ; ಇಬ್ಬರು ವಶಕ್ಕೆ

ಭಟ್ಕಳ : ಭಟ್ಕಳದಿಂದ ಮಂಗಳೂರು ಭಾಗಕ್ಕೆ ಅಕ್ರಮವಾಗಿ ಕೋಣಗಳ ಸಾಗಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಜೈನುಲ್ಲಾ ಚಮನ್ ಸಾಬ್ (28), ಇಮಾಮ್ ಹುಸೇನ್ ಮೌಲಾಲಿ ಸಾಬ್ ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೋಸ್ಟ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸಿದ್ದಾರೆ. ಈ ವೇಳೆ ವಾಹನದಲ್ಲಿ ಕೋಣಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಪಿಎಸ್‍ಐ ರನ್ನಗೌಡ ಪಾಟೀಲ್ ಮತ್ತು ಭರ್ಮಪ್ಪ ಬೆಳಗಲಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ವಾಹನದ ಸಮೇತ 17 ಕೋಣಗಳನ್ನು ವಶಕ್ಕೆ ಪಡೆಯಲಾಗಿದೆ. ಅದರಲ್ಲಿ 2ಕೋಣಗಳು ಸಾವನ್ನಪ್ಪಿವೆ. ಈ ಸಂಬಂಧ ಭಟ್ಕಳದ ಶಿರಾಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ