ಅಕ್ರಮ ಗೋ ಸಾಗಟ ಪತ್ತೆ; ನಾಲ್ಕು ಜಾನುವಾರುಗಳ ರಕ್ಷಣೆ

ಪುತ್ತೂರು : ಉಪ್ಪಿನಂಗಡಿ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಜಯಂತ್ ಗೌಡ ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ಅದರಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Related posts

ತಂದೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಪೆರೋಲ್‌ನಲ್ಲಿ ಉಡುಪಿಗೆ ಆಗಮಿಸಿದ ಭೂಗತ ಪಾತಕಿ ಬನ್ನಂಜೆ ರಾಜ

ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿದ ಸಂಸದ ಕೋಟ; ಎನ್ಐಎ ತನಿಖೆಗೆ ಒತ್ತಾಯ

ಆಟವಾಡುತ್ತಿದ್ದಾಗ ಹೃದಯಾಘಾತ; ಬಾಲಕ ಸಾವು