ತೆಕ್ಕಟ್ಟೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆ : ಪ್ರಕರಣ ದಾಖಲು

ಕುಂದಾಪುರ : ಕ್ರಿಕೆಟ್ ಬೆಟ್ಟಿಂಗ್ ನಿರತರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ ತೆಕ್ಕಟ್ಟೆಯಲ್ಲಿ ನಡೆದಿದೆ.

ಕೋಟ ಠಾಣಾಧಿಕಾರಿ ರಾಘವೇಂದ್ರ ಸಿ. ಅವರಿಗೆ ತೆಕ್ಕಟ್ಟೆ ಫಿಶ್ ಮಾರ್ಕೆಟ್ ಸಮೀಪ ಕೆಲ ಯುವಕರು ರಾಯಲ್ ಚಾಲೆಂಜ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆಯುವ ಐ.ಪಿ.ಎಲ್ ಕ್ರಿಕೆಟ್ ಮ್ಯಾಚ್‌ಗೆ ಸಂಬಂಧಪಟ್ಟು ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಾ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿರುವ ಬಗ್ಗೆ ಮಾಹಿತಿ ಬಂದಿತ್ತು.

ಸ್ಥಳಕ್ಕೆ ದಾಳಿ ನಡೆಸಿದಾಗ ಕ್ರಿಕೆಟ್ ಬೆಟ್ಟಿಂಗ್‌ ವೆಬ್‌ಸೈಟ್ ಮುಖಾಂತರ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಆರೋಪಿ ಕಿನಾರೆ ಬೀಚ್ ರಸ್ತೆಯ ಗಂಗಾಧ‌ರ್ ಎಂ. ಎನ್ನುವಾತನನ್ನು ವಶಕ್ಕೆ ಪಡೆದು ಬೆಟ್ಟಿಂಗ್‌ಗೆ ಬಳಸಿದ್ದ ನಗದು, ಪರಿಕರಗಳನ್ನು ವಶಕ್ಕೆ ಪಡೆಯಲಾಯಿತು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ