ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ದಾಸ್ತಾನು – ಆರೋಪಿಗೆ ನ್ಯಾಯಾಂಗ ಬಂಧನ

ಕಾರ್ಕಳ : ಬೋಳ ಗ್ರಾಮದಲ್ಲಿ ಅಕ್ರಮ ಗೋವಾ ಮದ್ಯ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಉಡುಪಿಯ ಪ್ರಶಾಂತ್‌ನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಕಾರವಾರಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಪೊಲೀಸ್‌ ಇಲಾಖೆ ಸಹಕಾರದೊಂದಿಗೆ ಕಾರವಾರ ಬಸ್‌ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಶನಿವಾರ ಬೋಳ ಗ್ರಾಮದ ಮನೆಯಲ್ಲಿ ದಾಳಿ ನಡೆಸಿದ್ದ ಅಬಕಾರಿ ಅಧಿಕಾರಿಗಳು ಲಕ್ಷಾಂತರ ಮೌಲ್ಯದ ಗೋವಾ ಮದ್ಯ ವಶಪಡಿಸಿಕೊಂಡಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ