ಬೆಳ್ತಂಗಡಿ : ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸ್ಥಳೀಯರ ಸಹಕಾರದೊಂದಿಗೆ ಬೆಳ್ತಂಗಡಿ ಪೊಲೀಸರು ಬಂಧಿಸಿ ಗೋವುಗಳನ್ನು ರಕ್ಷಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್(36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಎಂದು ಗುರುತಿಸಲಾಗಿದೆ.
ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಎರಡು ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇಲೆ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿ ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ.
ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಿಗೆಗಳು ಇಲ್ಲದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

