ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ : 5 ಮಂದಿ ಅಂತಾರಾಜ್ಯ ಕ್ರಿಮಿನಲ್ಸ್ ಅರೆಸ್ಟ್

ಮಂಗಳೂರು : ಮಾದಕ ವಸ್ತು ಹಾಗೂ ಅಕ್ರಮ ಪಿಸ್ತೂಲ್ ಸಾಗಾಟ, ಮಾರಾಟಕ್ಕೆ ಸಂಬಂಧಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬೇಕಾಗಿದ್ದ ಐವರು ಅಂತಾರಾಜ್ಯ ಕುಖ್ಯಾತ ಕ್ರಿಮಿನಲ್‌ಗಳನ್ನು ಸಿಸಿಬಿ ಪೊಲೀಸರು 24 ಗಂಟೆ ಅವಧಿಯಲ್ಲಿ ಬಂಧಿಸಿದ್ದಾರೆ.

ಕಾರ್ಯಾಚರಣೆ ವೇಳೆ ಕೇರಳ- ಕರ್ನಾಟಕ ರಾಜ್ಯಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾದ ಕಾಸರಗೋಡು ಜಿಲ್ಲೆಯ ನೌಫಲ್(38), ಮನ್ಸೂರ್(36), ಮೊಹಮ್ಮದ್ ಅಸ್ಕರ್(27), ಮೊಹಮ್ಮದ್ ಸಾಲಿ(31), ಕೊಯಿಕ್ಕೋಡ್ ಜಿಲ್ಲೆಯ ಅಬ್ದುಲ್ ಲತೀಫ್ ಯಾನೆ ತೋಕು ಲತೀಫ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 3 ಪಿಸ್ತೂಲ್, 6 ಸಜೀವ ಮದ್ದು ಗುಂಡುಗಳು ಹಾಗೂ 12.895 ಕೆ.ಜಿ ಗಾಂಜಾ, 3 ಕಾರು ಹಾಗೂ ಇತರ ಸೊತ್ತುಗಳ ವಶಪಡಿಸಿಕೊಂಡಿದ್ದಾರೆ.

ಆರೋಪಿ ಅಬ್ದುಲ್ ಲತೀಫ್ ಇತ್ತೀಚೆಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗೆ ಪಿಸ್ತೂಲ್ ನೀಡಿದ ಆರೋಪಿ. ಈತನಿಗಾಗಿ ಶೋಧ ನಡೆಸಲಾಗುತಿತ್ತು.

Related posts

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ತಲವಾರು ಝಳಪಿಸಿದ ಪ್ರಕರಣ; ಇಬ್ಬರ ಸೆರೆ

ಪಾರ್ಕ್‌ ಮಾಡಿದ್ದ ದ್ವಿಚಕ್ರವಾಹನ ಕಳವು