ಅಕ್ರಮ ಮರಳುಗಾರಿಕೆ : ಟಿಪ್ಪರ್ ಸಹಿತ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಹಿರಿಯಡ್ಕ : ಪೆರ್ಡೂರು ಮಡಿಸಾಲ್ ಹೊಳೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಹಿರಿಯಡ್ಕ ಪೊಲೀಸರು ಮರಳು ಸಾಗಾಟಕ್ಕೆ ಬಳಸಿದ್ದ ಟಿಪ್ಪರ್ ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸ್‌ ಉಪ ನಿರೀಕ್ಷಕರು ಮಂಜುನಾಥ ಮರಬದರವರು ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿರುವಾಗ ಉಡುಪಿ ತಾಲೂಕು ಪೆರ್ಡೂರು ಗ್ರಾಮದ ಕುಡ್ತುರಬೈಲು, ಮಠದಮಕ್ಕಿ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಈ ಸಂದರ್ಭದಲ್ಲಿ ಇಬ್ಬರು ಯುವಕರು ಹೊಳೆಯ ದಡದ ಬಳಿಯಲ್ಲಿದ್ದ ಮರಳನ್ನು ಟಿಪ್ಪರ್‌ ಟೆಂಪೋಗೆ ಲೋಡ್‌ ಮಾಡುತ್ತಿರುವುದು ಕಂಡು ಬಂದಿದ್ದು ಅವರನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ದಿಲೀಪ್‌ ಹಾಗೂ ಸಚಿನ್‌ ಎಂದು ಗುರುತಿಸಲಾಗಿದೆ. ಆರೋಪಿಗಳು ಮರಳನ್ನು ತೆಗೆಯಲು ಯಾವುದೇ ಪರವಾನಿಗೆ ಇಲ್ಲವಾಗಿ ತಿಳಿಸಿರುತ್ತಾರೆ. ಯಾವುದೇ ಪರವಾನಿಗೆ ಇಲ್ಲದೇ ಸರಕಾರಿ ಜಾಗದಿಂದ ಲಾಭಗಳಿಸುವ ಉದ್ದೇಶಗೋಸ್ಕರ ಅಕ್ರಮವಾಗಿ ಮರಳನ್ನು ಕಳವು ಮಾಡಿ ಸ್ವಂತ ಲಾಭಕ್ಕಾಗಿ ಬೇರೆಯವರಿಗೆ ಮಾರಾಟ ಮಾಡುತ್ತಿರುವುದಾಗಿದೆ.

ಆರೋಪಿತರು ಕೃತ್ಯಕ್ಕೆ ಬಳಸಿದ್ದ ಟೆಂಪೋ, 1½ ಯುನಿಟ್‌ನಷ್ಟು ಮರಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆ‌ಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್