ಮುಂಡ್ಕೂರಿನಲ್ಲಿ ಅಕ್ರಮ ಮರಳು ಸಾಗಾಟ : ಎರಡು ಯುನಿಟ್ ಮರಳು ಸಹಿತ ಟಿಪ್ಪರ್ ವಶಕ್ಕೆ

ಕಾರ್ಕಳ : ಪೊಲೀಸರು ಮುಂಡ್ಕೂರು ಭಾಗದಲ್ಲಿ ತಪಾಸಣೆ ನಡೆಸುತ್ತಿದ್ದಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಈ ವೇಳೆ ಪರಾರಿಯಾಗಲು ಯತ್ನಿಸಿದ ಟಿಪ್ಪರನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಪೊಲೀಸ್ ಸಿಬ್ಬಂದಿ ಸೋಮಪ್ಪ ಬೀಡಿ ಹಾಗೂ ವಿರೂಪಾಕ್ಷಿ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಸಂಕಲಕರಿಯ ಕಡೆಯಿಂದ ಬೆಳ್ಮಣ್ ಕಡೆಗೆ ಬರುತ್ತಿದ್ದ ಟಿಪ್ಪರ್ ನಿಲ್ಲಿಸುವಂತೆ ಸೂಚನೆ ನೀಡಿದರು. ಚಾಲಕ ಟಿಪ್ಪರ್ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದು ಪೊಲೀಸರು ಬೆನ್ನಟ್ಟಿದ್ದಾರೆ.

ಪಡಿತ್ತಾರ ಎಂಬಲ್ಲಿ ಟಿಪ್ಪ‌ರ್ ತಡೆದ ಪೊಲೀಸರು ಪರಿಶೀಲಿಸಿದಾಗ ಎರಡು ಯುನಿಟ್ ಮರಳು ಪತ್ತೆಯಾಗಿದೆ. ಚಾಲಕ ಪರಾರಿಯಾಗಿದ್ದು, ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಣಿಪಾಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿ ಮಹೇಶ್ ಪ್ರಸಾದ್

ಕುಡಿಯುವ ನೀರಿನ ತುರ್ತು ನಿರ್ವಹಣೆಗೆ ಅನುದಾನ ನೀಡಿ : ಸರ್ಕಾರಕ್ಕೆ ಗಂಟಿಹೊಳೆ ಮನವಿ

ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರ