ಅಕ್ರಮವಾಗಿ ಸಾಗಿಸುತ್ತಿದ್ದ 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ;

ಮಂಗಳೂರು : ದುಬಾೖ ಮತ್ತು ಅಬುಧಾಬಿಯಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸು‌ತ್ತಿದ್ದ 1.15 ಕೋ.ರೂಮೌಲ್ಯದ ಚಿನ್ನ, ಕೇಸರಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ.

ಡಿ.8 ಮತ್ತು 11ರ ನಡುವೆ ಏರ್‌‌ಇಂಡಿಯಾ ಮತ್ತು ಇಂಡಿಗೋ ವಿಮಾನಗಳಲ್ಲಿ ಬಂದ ಕಾಸರಗೋಡು ಮತ್ತು ಹೊನ್ನಾವರದ ಮೂವರು ಪ್ರಯಾಣಿಕರ ಅನುಮಾ‌ನಾಸ್ಪದ ಚಲನ ವಲನಗಳನ್ನು ಗಮನಿಸಿದ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ತಪಾಸಣೆಗೆ ಒಳಪಡಿಸಿದಾಗ ಒಳ ಉಡುಪುಗಳಲ್ಲಿ ಬಚ್ಚಿಟ್ಟಿದ್ದ ಚಿನ್ನ ಪತ್ತೆಯಾಗಿದೆ.

ಇನ್ನೊಂದು ಪ್ರಕರಣದಲ್ಲಿ ಗುದದ್ವಾರದಲ್ಲಿ ಅಡಗಿಸಿಟ್ಟಿದ್ದ ಚಿನ್ನ ಪತ್ತೆಯಾಗಿದೆ. ರಟ್ಟಿನಪೆಟ್ಟಿಗೆಯ ತಳದಲ್ಲಿ ಅಂಟಿಸಿ ಪುಡಿ ರೂಪದಲ್ಲಿ ಚಿನ್ನ ಸಾಗಿಸುತ್ತಿರುವುದನ್ನು ಪತ್ತೆ ಮಾಡಲಾಗಿದೆ. 1,429 ಗ್ರಾಂ ಚಿನ್ನದ ಆಭರಣಗಳು ಮತ್ತು 478 ಗ್ರಾಂ ತೂಕದ ಕೇಸರಿ ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್