ಸುಳ್ಯ : ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ ಪಂಚಾಯತ್ ರಾಜ್ ಸಮಾವೇಶದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡರು.
ಗ್ರಾಮ ಪಂಚಾಯತ್ ಸದಸ್ಯರ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸಿಕೊಡುವುದಾಗಿ ಭರವಸೆ ನೀಡಿದ ಅವರು ಈ ಹಿಂದೆಯೂ ಪ್ರತೀ ವಿಧಾನ ಮಂಡಲ ಅದಿವೇಶನದಲ್ಲಿ ಪಂಚಾಯತ್ ಸದಸ್ಯರ ವಿವಿಧ ಬೇಡಿಕೆಗೆ ದ್ವನಿಯೆತ್ತಿ ಸ್ಪಂದಿಸಿದ್ದೇನೆ, ಮುಂದೆಯೂ ನಿಮ್ಮ ಪರವಾಗಿ ಕೆಲಸ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ರಾಜಣ್ಣ, ಗ್ರಾಮ ಸ್ವರಾಜ್ ಪ್ರತಿಷ್ಠಾನ(ರಿ) ಇದರ ಅಧ್ಯಕ್ಷ ಕುಳಾಲು ಸುಭಾಷ್ಚಂದ್ರ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.