ಭಾರಿ ಮಳೆ ಹಿನ್ನೆಲೆ – ಮಂಗಳೂರು ತಾಲೂಕಿನಲ್ಲಿ ಇಂದು ಶಾಲೆ, ಪಿಯುಸಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನ ಶಾಲೆ, ಪಿಯುಸಿ ತರಗತಿಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಮಂಗಳೂರು ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.,8 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಇಂದು ರಜೆಯನ್ನು ಘೋಷಿಸಲಾಗಿದೆ.

ಮಂಗಳೂರು ತಾಲೂಕು ಅಂದರೆ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿ, ಮಂಗಳೂರು ಎ ಹೋಬಳಿ, ಸುರತ್ಕಲ್ ಹೋಬಳಿ ಮತ್ತು ಗುರುಪುರ ಹೋಬಳಿ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ) ಸೋಮವಾರ ರಜೆ ಘೋಷಿಸಲಾಗಿದೆ.

ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು. ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದೆ‌.

Related posts

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ