ಉಡುಪಿ: ನಗರ ಠಾಣಾ ವ್ಯಾಪ್ತಿಯಲ್ಲಿ ಕಳವಾದ ಸುಮಾರು 30ಕ್ಕೂ ಅಧಿಕ ಮೊಬೈಲ್ ಗಳನ್ನು ವಾರಸುದಾರರಿಗೆ ಹಸ್ತಾಂತರ

ನಗರ ಠಾಣಾ ವ್ಯಾಪ್ತಿಯಲ್ಲಿ ಕಳವಾದ ಸುಮಾರು 30ಕ್ಕೂ ಅಧಿಕ ಮೊಬೈಲ್ ಫೋನ್‌ಗಳನ್ನು ಇಂದು ನಗರ ಠಾಣೆಯಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಮಾತನಾಡಿ, ಮೊಬೈಲ್ ಕಳವಾದರೆ ಅದನ್ನು ಪತ್ತೆ ಹಚ್ಚುವ ಅತ್ಯಾಧುನಿಕ ತಂತ್ರಜ್ಞಾನವನ್ನು ಇಲಾಖೆ ಅಭಿವೃದ್ಧಿ ಪಡಿಸಿದೆ. ಮೊಬೈಲ್ ಕಳೆದುಕೊಂಡವರು KSP ಆ್ಯಪ್‌ನಲ್ಲಿ ಇ-ಲಾಸ್ ಅಪ್ಲಿಕೇಶನ್ ಒಳಗೆ ಕಳವಾದ ಮೊಬೈಲ್‌ನ ಐಎಂಇಐ ನಂಬರ್ ಹಾಕಬೇಕು. ಬಳಿಕ ಸಿಇಐಆರ್ ಪೋರ್ಟಲ್‌ನಲ್ಲಿ ನಂಬರ್ ಅಪ್ಲೋಡ್ ಮಾಡಲಾಗುತ್ತದೆ ಎಂದರು.

ಬಳಿಕ ಆ ನಂಬರ್‌ನ್ನು ಬ್ಲಾಕ್ ಮಾಡಲಾಗುತ್ತದೆ. ಕಳವಾದ ಮೊಬೈಲ್‌ಗೆ ಬೇರೆ ಸಿಮ್ ಹಾಕಿದರೆ ಕೂಡಲೇ ಸಿಇಐಆರ್ ಪೋರ್ಟಲ್‌ಗೆ ಸಂದೇಶ ಹೋಗಿ ಅದರ ವಿವರ ಲಭಿಸಲಿದೆ ಎಂದರು. ತಂತ್ರಜ್ಞಾನವನ್ನು ಬಳಸುವ ಬಗ್ಗೆ ಮಾಹಿತಿ ಇಲ್ಲದವರು, ಸ್ಥಳೀಯ ಠಾಣೆಗೆ ಭೇಟಿ ನೀಡಿ, ಅಲ್ಲಿಯೂ ದೂರು ದಾಖಲಿಸ ಬಹುದು ಎಂದರು.

ನಗರ ಠಾಣೆಯ ಪೊಲೀಸ್ ನಿರೀಕ್ಷಕ ಶ್ರೀಧರ್ ಸತಾರೆ, ಪಿಎಸ್‌ಐಗಳಾದ ಈರಣ್ಣ ಶಿರಗುಂಪಿ, ಭರತೇಶ್, ಪುನೀತ್, ಸಿಬಂದಿ ಚೇತನ್, ಬಶೀರ್ ಹಾಗೂ ವಿನಯ್ ಉಪಸ್ಥಿತರಿದ್ದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !