ರಜತಾದ್ರಿಯಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕಚೇರಿ ಉದ್ಘಾಟನೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಅಧಿಕೃತ ಕಚೇರಿಯನ್ನು ಮಣಿಪಾಲದ ‘ರಜತ್ರಾದ್ರಿ’ಯ ‘ಸಿ’ ಬ್ಲಾಕ್‌ನಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಸಂಸದ ಕೋಟ, ಜನಪರ ಕೆಲಸ ಕಾರ್ಯಗಳನ್ನು ಮಾಡಲು, ಸಾರ್ವಜನಿಕರ ಬೇಡಿಕೆ, ಕುಂದು ಕೊರತೆಗಳನ್ನು ಆಲಿಸಲು ಲೋಕಸಭಾ ಕ್ಷೇತ್ರದ ಸಂಸದರ ಅಧಿಕೃತ ಕಛೇರಿಯನ್ನು ಪ್ರಾರಂಭಿಸಲಾಗಿದೆ. ಸಂಘಟನೆಯ ಹಿರಿಯರಾದ ಗುಜ್ಜಾಡಿ ಪ್ರಭಾಕರ ನಾಯಕ್ ಅವರು ದೀಪ ಬೆಳಗಿಸಿ ಸಂಸದರ ಕಛೇರಿಗೆ ಚಾಲನೆ ನೀಡಿ ಇದು ಜನರ, ದುರ್ಬಲರ, ಸಾರ್ವಜನಿಕರ, ಜನ ಸಾಮಾನ್ಯರ ಕೆಲಸ ಮಾಡಲಿ ಎಂದು ಶುಭ ಹಾರೈಸಿದ್ದಾರೆ. ನಾನು ಮತ್ತು ಸಿಬ್ಬಂದಿಗಳು ಒಟ್ಟಾಗಿ ಜನ ಸಾಮಾನ್ಯರ ಸೇವೆ ಮಾಡಲು ದುಡಿಯುವ ಮೂಲಕ ಜನರ ಸಮಸ್ಯೆಗಳನ್ನು ಪರಿಹಾರ ಮಾಡಲು ಬದ್ಧತೆಯಿಂದ ಪ್ರಯತ್ನಿಸುತ್ತೇವೆ. ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಂಸದರ ಕಛೇರಿ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕರಾದ ಯಶ್‌ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮತ್ತಿತರರು ಉಪಸ್ಥಿತರಿದ್ದರು.

Related posts

ಉಡುಪಿ ಜಿಲ್ಲೆಯಲ್ಲಿ ಮಂಗನಕಾಯಿಲೆ ಪ್ರಕರಣ ಬಾರದಂತೆ ಮುನ್ನೆಚ್ಚರಿಕೆ ವಹಿಸಿ : ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ನಿಷೇಧಾಜ್ಞೆ, ಸಂತೆ, ಜಾತ್ರೆ ನಿಷೇಧ ಆದೇಶ ಹಿಂದೆಗೆತ : ಉಡುಪಿ ಜಿಲ್ಲಾಧಿಕಾರಿ

ಶಾಲಾ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಸವಾರ ಮೃತ್ಯು