ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೋಲು-ಗೆಲುವನ್ನು ಸಮಾನವಾಗಿ ಪರಿಗಣಿಸಿ ಮುನ್ನಡೆಯುವ ಸಾಮರ್ಥ್ಯವನ್ನು ಕ್ರೀಡೆಗಳು ಕಲಿಸುವುದರ ಜೊತೆಗೆ ಮತ್ತೊಬ್ಬರ ಗೆಲುವನ್ನು ಸಹ ಸಂಭ್ರಮಿಸುವ ಮನೋಭಾವವನ್ನು ನಾವು ಬೆಳಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಪೌರಯುಕ್ತ ರಾಯಪ್ಪ, ವಾಲಿಬಾಲ್‌ ತರಬೇತುದಾರ ರಾಜೇಶ್ ಪತ್ತರ್‌, ಉಡುಪಿ ತಾಲೂಕು ಕ್ರೀಡಾಧಿಕಾರಿ ವಸಂತ್‌ ಜೋಗಿ, ಕಾಪು ತಾಲೂಕು ಕ್ರೀಡಾಧಿಕಾರಿ ರಿತೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗಣದಲ್ಲಿ ಪುರುಷರ ಹಾಗೂ ಮಹಿಳೆಯರ ವಾಲಿಬಾಲ್ ಹಾಗೂ ಕಬಡ್ಡಿ ಪಂದ್ಯಾಟಗಳು ಜರಗಿದವು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !