ಹೆಬ್ರಿ ಅರ್ಥ್ ಮೂವರ್ಸ್ ಯೂನಿಯನ್ ಅಸೋಸಿಯೇಷನ್ ನೂತನ ಕಚೇರಿ ಉದ್ಘಾಟನೆ

ಹೆಬ್ರಿ : ಅರ್ಥ್ ಮೂವರ್ಸ್ ಯೂನಿಯನ್ ಅಸೋಸಿಯೇಷನ್ ಹೆಬ್ರಿ ಇದರ ನೂತನ ಕಚೇರಿ ಉದ್ಘಾಟನಾ ಸಮಾರಂಭ ಕನ್ಯಾನದ ಸರಸ್ವತಿ ಹೋಟೆಲ್ ಬಳಿ ಶುಕ್ರವಾರದಂದು ಜರುಗಿತು.

ಹೆಬ್ರಿ ವಲಯ ಅರಣ್ಯಾಧಿಕಾರಿ ಸಿದ್ಧಿಶ್ವರ್ ಉದ್ಘಾಟಿಸಿ ಶುಭ ಹಾರೈಸಿದರು. ಅರ್ಥ್ ಮೂವರ್ಸ್ ಅಸೋಸಿಯೇಷನ್ ಅಧ್ಯಕ್ಷ ಪ್ರತಾಪ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಹೆಬ್ರಿ ಪೊಲೀಸ್ ಠಾಣೆಯ ಎಎಸ್‌ಐ ಶ್ರೀಧರ್, ರೈತ ಸೇವಾ ಗ್ರಾಮೋದ್ಯೋಗದ ಲಕ್ಷ್ಮೀನಾರಾಯಣ ನಾಯಕ್, ಅಸೋಸಿಯೇಷನ್ ಕಾರ್ಯದರ್ಶಿ ಸನತ್ ಕುಮಾರ್ ಶೆಟ್ಟಿ, ಹಾಗೂ ಸಂಘದ ಸರ್ವ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. ಸಿಎಂ ಪ್ರಸನ್ನ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ