ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆ ತನ್ನ ಹೊಸದಾಗಿ ನವೀಕರಿಸಿದ ಡಯಾಲಿಸಿಸ್‌ ಘಟಕವನ್ನು ಅನಾವರಣಗೊಳಿಸಿದೆ. ಡಾ.ರಾಮದಾಸ್ ಪೈ ಬ್ಲಾಕ್‌ನಲ್ಲಿರುವ ಅತ್ಯಾಧುನಿಕ ಡಯಾಲಿಸಿಸ್ ಸೌಲಭ್ಯದ ಜೊತೆಗೆ, ವಿಸ್ತ್ರತ ಘಟಕವು ಆಸ್ಪತ್ರೆಯ ಸಾಮರ್ಥ್ಯವನ್ನು ಹೆಚ್ಚಿಸಲು ಸಜ್ಜಾಗಿದೆ. ವಿಶೇಷವಾಗಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ (ಸಿಕೆಡಿ) ಬಳಲುತ್ತಿರುವವರಿಗೆ ಉನ್ನತ-ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಆಸ್ಪತ್ರೆಯ ನಿರಂತರ ಬದ್ಧತೆಯಲ್ಲಿ ಇದು ಪ್ರಮುಖ ಮೈಲಿಗಲ್ಲಾಗಿದೆ.

ಮಾಹೆ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ನವೀಕರಿಸಿದ ಘಟಕವನ್ನು ಉದ್ಘಾಟಿಸಿ ಮಾತನಾಡಿದರು “ಈ ನವೀಕರಿಸಿದ ಡಯಾಲಿಸಿಸ್ ಘಟಕ ಕರಾವಳಿ ಕರ್ನಾಟಕದ ಜನರಿಗೆ ಮೂತ್ರಪಿಂಡ ಕಸಿ ಸೇವೆಗಳ ಜೊತೆಗೆ ಸಮಗ್ರ ಮೂತ್ರಪಿಂಡ ಆರೈಕೆಯನ್ನು ಒದಗಿಸುವ ಪ್ರಮುಖ ಹೆಜ್ಜೆಯಾಗಿದೆ” ಎಂದರು.

ಕೆಎಂಸಿ ಮಣಿಪಾಲದ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಮಾಹೆ ಬೋಧನಾ ಆಸ್ಪತ್ರೆಗಳ ಸಿಒಒ ಡಾ. ಆನಂದ್ ವೇಣುಗೋಪಾಲ್‌, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಮೂತ್ರಪಿಂಡ ಶಾಸ್ತ್ರ ಮತ್ತು ಮೂತ್ರಪಿಂಡ ಕಸಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ದರ್ಶನ್ ರಂಗಸ್ವಾಮಿ ಸೇರಿದಂತೆ ಹಿರಿಯ ಮೂತ್ರಪಿಂಡ ಶಾಸ್ತ್ರ ತಜ್ಞರು ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ