ಕಾಪು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ “ಬೇಟಿ ಬಚಾವೋ ಬೇಟಿ ಪಡಾವೋ” (ಮಗಳನ್ನು ಉಳಿಸಿ ಮಗಳನ್ನು ಓದಿಸಿ) ಅಭಿಯಾನದ ಪ್ರಯುಕ್ತ ಪೊಲಿಪು ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ “ಹದಿಹರೆಯದ ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆ ಮತ್ತು ವೃತ್ತಿ ಸಮಾಲೋಚನೆ ಕಾರ್ಯಕ್ರಮನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.
ಶಾಸಕರು ಮಾತನಾಡಿ ಜಗತ್ತಿನಲ್ಲಿ ಹೆಣ್ಣು ಮಕ್ಕಳ ಪಾತ್ರ ಬಹುಮುಖ್ಯವಾದದ್ದು. ಹೆಣ್ಣು ಮಕ್ಕಳನ್ನು ರಕ್ಷಿಸುವ ಕಾರ್ಯವಾಗಬೇಕು. ಪ್ರಸ್ತುತ ಸಮಾಜದಲ್ಲಿ ವಿವಿಧ ಪಾಳಿಯಲ್ಲಿ ಉದ್ಯೋಗ ಮಾಡುವಂತ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಅತ್ಯಗತ್ಯ ಎಂದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಪುರಸಭೆಯ ಸದಸ್ಯರಾದ ರಾಧಿಕಾ, ಕಾಪು ತಹಶೀಲ್ದಾರರಾದ ಪ್ರತೀಭಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಕುಮಾರ್ ವಿ ನಾಯ್ಕ್, ಪೊಲಿಪು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶಿವಲಿಂಗಪ್ಪ ಹಾಗೂ ಗಣ್ಯರು ಉಪಸ್ಥಿತರಿದ್ದರು.