ಕಲ್ಯಾ ಗ್ರಾಮ ಪಂಚಾಯತ್‌ನಲ್ಲಿ ಕೌಶಲ್ಯಾಧಾರಿತ ಉದ್ಯಮಶೀಲತಾ ಕಸೂತಿ ತರಬೇತಿ ಉದ್ಘಾಟನೆ

ಕಾರ್ಕಳ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಕೃಷಿ ಇಲಾಖೆ ಉಡುಪಿ ಹಾಗೂ ಗ್ರಾಮ ಪಂಚಾಯತ್ ಕಲ್ಯಾ ಇವರ ಜಂಟಿ ಆಶ್ರಯದಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯೀ ಯೋಜನೆಯಡಿಯಲ್ಲಿ 10 ದಿನಗಳ ಕೌಶಲ್ಯಾಧಾರಿತ ಉದ್ಯಮಶೀಲತ ಕಸೂತಿ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಕುಂಟಾಡಿ ರಕ್ತೇಶ್ವರಿ ದೇವಸ್ಥಾನದಲ್ಲಿ ನಡೆಯಿತು.

ಕಲ್ಯಾ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾದ ಹರಿಜೀವನ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕೃಷಿ ಅಧಿಕಾರಿಯಾದ ಸಿದ್ಧಪ್ಪ, ಜಲಾನಯನ ಸಹಾಯಕರಾದ ದಿಲೀಪ್ ಹಾಗೂ ಕಲ್ಯಾ ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ತರಬೇತಿದಾರರಾದ ಸಂಧ್ಯಾ, ಪೃಥ್ವಿರಾಜ್ ನಾಯಕ್, ಒಕ್ಕೂಟ ಅಧ್ಯಕ್ಷರಾದ ಸುಮನ ಹರೀಶ್, ಒಕ್ಕೂಟ ಉಪಾಧ್ಯಕ್ಷರಾದ ಸರಿತಾ ಮೊದಲಾದವರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ