ಪಬ್‌ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ – ನಾಲ್ವರು ಕಾಮುಕರು ಅರೆಸ್ಟ್

ಮಂಗಳೂರು : ನಗರದ ಪಾಂಡೇಶ್ವರದ ಫೊರಮ್ ಮಾಲ್‌ನಲ್ಲಿರುವ ಶೆರ್‌ಲಾಕ್ ಪಬ್‌ನಲ್ಲಿ ಯುವತಿಯೊಬ್ಬಳೊಂದಿಗೆ ಅಸಭ್ಯವಾಗಿ ವರ್ತಿಸಿ ಚುಡಾಯಿಸಿದ ನಾಲ್ವರು ಕಾಮುಕರನ್ನು ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ.

ಪುತ್ತೂರು ನೆಹರೂ ನಗರ ನಿವಾಸಿಗಳಾದ ವಿನಯ್(33), ಮಹೇಶ್(27), ಪುತ್ತೂರು ಪಡ್ನೂರು ನಿವಾಸಿಗಳಾದ ಪ್ರಿತೇಶ್(34), ನಿತೇಶ್(33) ಬಂಧಿತ ಕಾಮುಕರು.

ಆ.3ರಂದು ರಾತ್ರಿ 10.30ಸುಮಾರಿಗೆ 22ವರ್ಷದ ಸಂತ್ರಸ್ತ ಯುವತಿ ತನ್ನ ಸ್ನೇಹಿತೆಯೊಂದಿಗೆ ಶೆರ್‌ಲಾಕ್ ಪಬ್‌ಗೆ ಬಂದಿದ್ದರು. ಆಕೆಯೊಂದಿಗೆ ಈ ನಾಲ್ವರು ಅಸಭ್ಯವಾಗಿ ವರ್ತಿಸಿ ಮಾನಭಂಗ ಮಾಡುವ ಉದ್ದೇಶದಿಂದ ಎದೆಯ ಭಾಗಕ್ಕೆ ಕೈ ಹಾಕಿದ್ದಾರೆ. ಈ ಬಗ್ಗೆ ವಿಚಾರಿಸಿದ ಮತ್ತೊಬ್ಬಾಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೀಯರ್ ಬಾಟ್ಲಿಯಲ್ಲಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಬಗ್ಗೆ ಸಂತ್ರಸ್ತೆ ನೀಡಿರುವ ದೂರಿನಂತೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ನಾಲ್ವರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ