ಉಡುಪಿ : ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತದಲ್ಲಿದ್ದು ಗರ್ಡರ್ ಜಾರಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ವಾರದಲ್ಲಿ ರೈಲ್ವೇ ಇಲಾಖೆಯ ಸಂಶೋಧನೆ ವಿನ್ಯಾಸ ಮತ್ತು ಗುಣಮಟ್ಟ ಸಂಘಟನೆ (ಆರ್‌ಡಿಎಸ್‌ಒ) ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಈ ತಿಂಗಳ ಅಂತ್ಯದೊಳಗೆ ಮೇಲ್ಸೇತುವೆ ಜೋಡಣೆ ಕಾರ್ಯಪೂರ್ಣಗೊಳ್ಳಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಇಂದ್ರಾಳಿ ಮೇಲ್ಸೇತುವೆ ಗರ್ಡರ್ ಜಾರಿಸುವ ಪ್ರಕ್ರಿಯೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಎಲ್ಲ ರೀತಿಯ ಸುರಕ್ಷತೆಗೊಂದಿಗೆ ಈ ಕಾರ್ಯ ಮಾಡಬೇಕು. ಯಾವುದೇ ರೀತಿಯಲ್ಲೂ ಸಮಸ್ಯೆ ಅಗದಂತೆ ಎಚ್ಚರ ವಹಿಸಬೇಕು. ಅಲ್ಲದೆ, ಈ ವಾರದಲ್ಲಿ ಆರ್‌ಡಿಸಿಎಸ್‌ಒ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಅನುಮತಿ ನೀಡಲಿದ್ದಾರೆ. ಹೀಗಾಗಿ ಎಷ್ಟು ಸಾಧ್ಯವೊ ಅಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಅಧಿಕಾರಿಗಳಾದ ಮಂಜುನಾಥ ಗೌಡ, ಮಂಜುನಾಥ ನಾಯ್ಕ, ನಗರಸಭೆ ಸದಸ್ಯ ಗಿರೀಶ್ ಅಂಚನ್ ಉಪಸ್ಥಿತರಿದ್ದರು.