ಅನರ್ಹ ಬಿಪಿಎಲ್‌ ಕಾರ್ಡ್‌ ಪರಿಶೀಲನೆ ಆರಂಭ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ; 6 ತಿಂಗಳಿಂದ ಪಡಿತರ ತೆಗೆದುಕೊಳ್ಳದ ಬಿಪಿಎಲ್ ಕಾರ್ಡ್‌ಗಳ ಮುಟ್ಟುಗೋಲು

ಉಡುಪಿ : ಜಿಲ್ಲೆಯಲ್ಲಿ ಸದ್ಯ ಶೇ.85ರಷ್ಟು ಬಿಪಿಎಲ್‌ ಪಡಿತರ ಕಾರ್ಡ್‌‌ಗಳಿದ್ದು, 1.97 ಲಕ್ಷ ಕುಟುಂಬಗಳು ಬಿಪಿಎಲ್‌ ಕಾರ್ಡ್‌ ಹೊಂದಿವೆ. ಇದರಲ್ಲಿ ಅನರ್ಹರೂ ಕಾರ್ಡ್‌ ಪಡೆದಿರುವ ಸಾಧ್ಯತೆ ಇದೆ. ಹೀಗಾಗಿ ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಪರಿಶೀಲಿಸುವ ಸಲುವಾಗಿ ಸರ್ವೇ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹೇಳಿದರು.

ಉಡುಪಿ ಜಿಲ್ಲಾಧಿಕಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 6 ತಿಂಗಳಿಂದ ಯಾರು ಪಡಿತರ ತೆಗೆದುಕೊಂಡಿಲ್ಲವೋ ಅವರ ಕಾರ್ಡ್‌ಗಳನ್ನು ಆರಂಭದಲ್ಲಿ ಮುಟ್ಟುಗೋಲು ಹಾಕುತ್ತೇವೆ. ಹಾಗೆಯೇ 1.20 ಲಕ್ಷಕ್ಕಿಂತ ಅಧಿಕ ಆದಾಯ ಇರುವ ಮತ್ತು ಮನೆಯ ಪರಿಸ್ಥಿತಿಯನ್ನು ಅವಲೋಕಿಸಿಯೇ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತದೆ ಎಂದರು.
ಸದ್ಯ ಈ ಪ್ರಕ್ರಿಯೆ ಆರಂಭವಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಬಿಪಿಎಲ್‌ ಕಾರ್ಡ್‌ ಅರ್ಹತೆಗಿಂತ ಅಧಿಕ ಆದಾಯ ಇದ್ದಲ್ಲಿ ಕಾರ್ಡ್‌ ವಾಪಸ್‌ ಸಲ್ಲಿಸಲು ಅವಕಾಶವಿದೆ. ಸರಕಾರಿ ಅಧಿಕಾರಿ, ನೌಕರರು ದಂಡ ಪಾವತಿಸಬೇಕಾಗುತ್ತದೆ. ಉಳಿದವರು ದಂಡ ಪಾವತಿಸುವ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ ಎಂದು ಅವರು ತಿಳಿಸಿದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು