ಆಸ್ಪತ್ರೆ ಸಿಬ್ಬಂದಿಗಳಲ್ಲಿ ಒತ್ತಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ

ಉಡುಪಿ : ಉಡುಪಿ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ, ಕಮಲ್ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಮತ್ತು ಇಂಡಿಯನ್ ಸೈಕ್ಯಾಟ್ರಿಕ್ ಸೊಸೈಟಿ ಕರ್ನಾಟಕ ಚಾಪ್ಟರ್ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಆಸ್ಪತ್ರೆಯ ಸಿಬ್ಬಂದಿಯವರಲ್ಲಿ ಒತ್ತಡ ನಿರ್ವಹಣೆ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಸ್ಪತ್ರೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರವನ್ನು ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಅಧ್ಯಕ್ಷ ಹಾಗೂ ಮೂಳೆ ರೋಗ ತಜ್ಞ ಡಾ.ಸುರೇಶ್‌ ಶೆಣೈ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಮಣಿಪಾಲ ಕೆಎಂಸಿಯ ಸಹ ಪ್ರಾಧ್ಯಾಪಕ ಮತ್ತು ಮನೋ ವೈದ್ಯ ಡಾ.ಅನಿಲ್ ಕುಮಾರ್ ಎಂ.ಎನ್., ಹೆರಿಗೆ ಮತ್ತು ಸ್ತ್ರೀ ರೋಗ ತಜ್ಞ ಡಾ.ಶರತ್‌ಚಂದ್ರ ರಾವ್ ಮಾತನಾಡಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮನೋವೈದ್ಯ ಡಾ.ಅನಿಲ್‌ ಕುಮಾ‌ರ್ ‘ಆಸ್ಪತ್ರೆಯ ಸಿಬ್ಬಂದಿಯವರಲ್ಲಿ ಒತ್ತಡ ನಿರ್ವಹಣೆ, ಯೋಗ ಚಿಕಿತ್ಸಕಿ ಅನ್ವಿತಾ ‘ಯೋಗ ಮತ್ತು ಒತ್ತಡ ನಿರ್ವಹಣೆ’ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ನೀಡಿದರು. ಉಡುಪಿ ಪರಿಸರದಲ್ಲಿರುವ ಬೇರೆ ಬೇರೆ ಆಸ್ಪತ್ರೆಯ ಸುಮಾರು 60ಕ್ಕೂ ಹೆಚ್ಚಿನ ಸಿಬ್ಬಂದಿ ವರ್ಗದವರು ಈ ಶಿಬಿರದ ಪ್ರಯೋಜನವನ್ನು ಪಡೆದರು.

ಅಧ್ಯಕ್ಷತೆಯನ್ನು ಡಾ.ಎ.ವಿ.ಬಾಳಿಗ ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕ ಹಾಗೂ ಮನೋವೈದ್ಯ ಡಾ.ಪಿ.ವಿ. ಭಂಡಾರಿ ವಹಿಸಿದ್ದರು. ಆಸ್ಪತ್ರೆಯ ಮನೋವೈದ್ಯರಾದ ಡಾ.ದೀಪಕ್ ಮಲ್ಯ ಮತ್ತು ಡಾ.ಮಾನಸ್ ಈ.ಆ‌ರ್. ಉಪಸ್ಥಿತರಿ‌ದ್ದರು. ಆಸ್ಪತ್ರೆಯ ಆಡಳಿತ ಅಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಸ್ವಾಗತಿಸಿದರು. ಮನೋವೈದ್ಯ ಡಾ.ಮಾನಸ್‌ ಈ.ಆ‌ರ್. ವಂದಿಸಿದರು. ಆಪ್ತ ಸಮಾಲೋಚಕ ದೀಪಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್