ವಿಶ್ವ ಜನಸಂಖ್ಯಾ ದಿನಾಚರಣೆ ಕುರಿತು ಮಾಹಿತಿ ಕಾರ್ಯಾಗಾರ

ಕೋಟ : ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೋಟರಿ ಸಮುದಾಯದಳ ಮೂಡುಗಿಳಿಯಾರು ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಅಂಗನವಾಡಿ ಕೇಂದ್ರ ಹೊನ್ನಾರಿಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ತಾಯಿ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಸೋಮವಾರ ನಡೆಸಲಾಯಿತು.

ಕೋಟ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾ‌ರ್, ಪಿಎಚ್‌ಸಿ ಮಂದಾನಾಯಕ್ ಶಿಬಿರವನ್ನು ನಡೆಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ವಹಿಸಿದ್ದರು.

ಕ್ಲಬ್‌ನ ಸದಸ್ಯ ಶರಣಯ್ಯ ಹಿರೇಮಠ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಗಂಗಾ ಸ್ವಾಗತಿಸಿದರು. ಕ್ಲಬ್‌ನ ಪೂರ್ವಾಧ್ಯಕ್ಷ ದೇವಪ್ಪ ಪಟಗಾರ ಕಾರ್ಯಕ್ರಮವನ್ನು ನಿರೂಪಿಸಿದರು. ಆರೋಗ್ಯ ನಿರೀಕ್ಷಣಾಧಿಕಾರಿ ಹರಿಶ್ಚಂದ್ರ ನಾಯಕ್ ವಂದಿಸಿದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ