ನವಂಬರ್ 1ಕ್ಕೆ ಭುಜಂಗ ಪಾರ್ಕ್‌ನಲ್ಲಿ ಹಲ್ಮಡಿ ಶಾಸನದ ಪ್ರತಿಕೃತಿ ಸ್ಥಾಪನೆ- ಜಿಲ್ಲಾಧಿಕಾರಿ

ಉಡುಪಿ : ರಾಜ್ಯ ಸರಕಾರದ ಸೂಚನೆಯಂತೆ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ ಒಂದರಂದು ನಗರದ ಅಜ್ಜರಕಾಡಿನಲ್ಲಿರುವ ಭುಜಂಗ ಪಾರ್ಕ್‌ನಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ ತಯಾರಿಸಲಾದ ಕನ್ನಡ ಲಿಪಿಯಲ್ಲಿ ರಾಜ್ಯದಲ್ಲಿ ದೊರೆತ ಮೊಟ್ಟಮೊದಲ ಶಿಲಾ ಶಾಸನ ಎಂದು ಪರಿಗಣಿಸಲ್ಪಟ್ಟ ‘ಹಲ್ಮಡಿ ಶಾಸನ’ದ ಪ್ರತಿಕೃತಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ತಿಳಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕರ್ನಾಟಕ ಸಂಭ್ರಮ 50ರ ಸಂದರ್ಭದಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವೈಭವಯುತವಾಗಿ ಆಚರಿಸಲು ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನವೆಂಬರ್ 1ರಂದು ನಗರದ ಅಜ್ಜರಕಾಡು ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶವನ್ನು ನೀಡಲಿದ್ದಾರೆ ಎಂದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ