‘ತರ್ಪಣ’ ಕೊಂಕಣಿ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

ಉಡುಪಿ : ವಿಯೆಟ್ನಾಂನಲ್ಲಿ ಜರಗಿದ 9ನೇ ಅಂತಾರಾಷ್ಟ್ರೀಯ ಚಲನಚಿತ್ರ ಉತ್ಸವದಲ್ಲಿ ಕೊಂಕಣಿ ಸಿನೆಮಾ “ತರ್ಪಣ”ಕ್ಕೆ ಪ್ರಾದೇಶಿಕ ವಿಭಾಗದಲ್ಲಿ ಶ್ರೇಷ್ಠ ನಟ ಮತ್ತು ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಲಭಿಸಿದೆ.

ನಟಿ ಮೇಘನಾ ನಾಯ್ಡು ಮತ್ತು ಉದ್ಯಮಿ ಡಾ| ನಮಿತಾ ಕೋಹಕ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಪ್ರಶಸ್ತಿ ಪ್ರದಾನ ಮಾಡಿದರು. ದೇವದಾಸ್‌ ನಾಯಕ್‌ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಮತ್ತು ಸಂಜಯ್‌ ಸಾವ್ಕುರ್‌ ಶ್ರೇಷ್ಠ ನಟ ಪ್ರಶಸ್ತಿಯನ್ನು ಸ್ವೀಕರಿಸಿದರು.

ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಕೌಟುಂಬಿಕ ಜೀವನದ ಕಥೆಯನ್ನಾಧರಿಸಿದ ಈ ಚಲನಚಿತ್ರಕ್ಕೆ ಹಲವು ಪ್ರಶಸ್ತಿಗಳು ಬಂದಿವೆ. ಸಿನೆಮಾವನ್ನು ಕರಾವಳಿಯಲ್ಲಿ ಚಿತ್ರೀಕರಿಸಲಾಗಿತ್ತು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ