ಶ್ರೀಕೃಷ್ಣ ಮಠಕ್ಕೆ ಅಂತಾರಾಷ್ಟ್ರೀಯ ಪ್ರವಚನಕಾರ ಗೋಪಾಲದಾಸ್‌ ಗೌರ್‌ ಭೇಟಿ

ಉಡುಪಿ : ಅಂತಾರಾಷ್ಟ್ರೀಯ ಪ್ರವಚನಕಾರ, ಲೇಖಕ, ಅಧ್ಯಾತ್ಮಗುರು ಗೋಪಾಲದಾಸ್‌ ಗೌರ್‌ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾ‌ದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.

ಅನಂತರ ಪುತ್ತಿಗೆ ಶ್ರೀಪಾದರ ಪ್ರಧಾನ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞದ ಅಂಗವಾಗಿ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್‌ ಗೀತೋತ್ಸವದ ಪ್ರಯುಕ್ತ ಡಿಸೆಂಬರ್ 11ರಂದು ನಡೆಯಲಿರುವ ಗೀತಾ ಜಯಂತಿ ಹಾಗೂ ಸಹಸ್ರ ಕಂಠ ಗೀತಾ ಪಾರಾಯಣದ ಬಗ್ಗೆ ಮಾಹಿತಿ ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಪುತ್ತಿಗೆ ಮಠದ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ