ಎಟಿಎಂ ಬದಲಿಸಿ ಹಣ ಡ್ರಾ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಬಂಧನ: ನಗದು, ಎಟಿಎಂ ಕಾರ್ಡ್ ವಶ

ಅಜೆಕಾರು : ಅಜೆಕಾರು ಎಟಿಎಂ ಕೇಂದ್ರದಲ್ಲಿ ಹಣ ಡ್ರಾ ಮಾಡಲು ಹೋಗಿದ್ದವರನ್ನು ವಂಚಿಸಿ ಅವರ ಕಾರ್ಡ್‌ ಬದಲಿಸಿ ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಅಜೆಕಾರು ಪೊಲೀಸರು ಮರ್ಣೆ ಗ್ರಾಮದ ಕಾಡುಹೊಳೆ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಬಂಧಿಸಿದ್ದಾರೆ.

ಮಹಾರಾಷ್ಟ್ರದ ಶ್ರವಣ್‌ ಸತೀಶ ಮಿನಜಗಿ (27), ಪ್ರದೀಪ ಮಾರುತಿ ಇಂಗ್ಲೆ (27) ಹಾಗೂ ಕಿರಣ್‌ ಬಾಲು ಚೌಹಾಣ್‌ (28) ಬಂಧಿತ ಆರೋಪಿಗಳು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಆರೋಪಿಗಳಿಂದ ಸ್ವಿಫ್ಟ್ ಕಾರು, 70,000 ರೂ. ಹಣ, 3 ಮೊಬೈಲ್‌ ಫೋನ್‌ ಹಾಗೂ ವಿವಿಧ ಬ್ಯಾಂಕ್‌ಗಳ 52 ಎಟಿಎಂ ಕಾರ್ಡ್‌ಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ದ ಎಟಿಎಂ ಕಾರ್ಡ್‌ ವಂಚನೆಗೆ ಸಂಬಂದಿಸಿದಂತೆ 70‌ಕ್ಕೂ ಹೆಚ್ಚು ಪ್ರಕರಣ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದೆ. ಆರೋಪಿಗಳು ಕುಖ್ಯಾತ ಅಂತಾರಾಜ್ಯ ಕಳ್ಳರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ