ಮುಖ್ಯನಾಯಮೂರ್ತಿಗಳಿಗೆ ಉಡುಪಿ ವಕೀಲರ ಸಂಘದ ನಿಯೋಗದಿಂದ ಆಹ್ವಾನ

ಉಡುಪಿ : ಉಡುಪಿಯ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿಹಬ್ಬ (125ನೇ ವಾರ್ಷಿಕೋತ್ಸವ)ವನ್ನು ನವೆಂಬರ್ ತಿಂಗಳ 17 ಮತ್ತು 18ರಂದು ವಿಜೃಂಭಣೆಯಿಂದ ಏರ್ಪಡಿಸಲು ಉದ್ದೇಶಿಸಿದ್ದು, 17ರಂದು ನಡೆಯಲಿರುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸುವಂತೆ ಉಡುಪಿ ವಕೀಲರ ಸಂಘದ ನಿಯೋಗವು ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಅವರ ನೇತೃತ್ವದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯ ಅವರನ್ನು ಭೇಟಿಯಾಗಿ ಆಹ್ವಾನಿಸಿತು.

ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಒಪ್ಪಿಗೆ ಸೂಚಿಸಿದ ಮುಖ್ಯ ನ್ಯಾಯಮೂರ್ತಿಗಳು, ಕಾರ್ಯಕ್ರಮಕ್ಕೆ ಶುಭ ಕೋರಿದರು.

ನಿಯೋಗದಲ್ಲಿ ವಕೀಲರ ಸಂಘದ ಖಜಾಂಚಿ ಗಂಗಾಧರ ಎಚ್.ಎಮ್., ಕಾರ್ಯಕಾರಿ ಸಮಿತಿ ಸದಸ್ಯ ಆರೂರು ಸುಕೇಶ್ ಶೆಟ್ಟಿ, ನ್ಯಾಯವಾದಿ ಶಿವಾನಂದ ಅಮೀನ್, ಹಿರಿಯ ವಕೀಲರಾದ ಆನಂದ ಮಡಿವಾಳ, ಜಯಕೃಷ್ಣ ಆಳ್ವ, ಹೈಕೋರ್ಟ್ ವಕೀಲರಾದ ಪ್ರಸಾದ್ ಹೆಗ್ಡೆ ಮತ್ತು ಪ್ರಸನ್ನ ಶೆಟ್ಟಿ ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ