ಉಡುಪಿಯಲ್ಲಿ ನಡೆಯಲಿರುವ ಬೃಹತ್ ಗೀತೋತ್ಸವಕ್ಕೆ ಕಾಂಚೀ ಶ್ರೀಗಳಿಗೆ ಆಹ್ವಾನ

ಉಡುಪಿ : ಪುತ್ತಿಗೆ ಮಠದ ವಿಶ್ವ ಗೀತಾ ಪರ್ಯಾಯ ಅಂಗವಾಗಿ ಪರ್ಯಾಯ ಪೀಠಾಧೀಶರಾದ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಮಹತ್ವಾಕಾಂಕ್ಷಿ ಯೋಜನೆಯಾದ ಭಗವದ್ಗೀತಾ ಕೋಟಿ ಲೇಖನ ಯಜ್ಞ ಹಿನ್ನೆಲೆಯಲ್ಲಿ ಕೃಷ್ಣಮಠದಲ್ಲಿ ಆಯೋಜಿಸಲಾಗುವ ಬೃಹತ್ ಗೀತೋತ್ಸವ ಉದ್ಘಾಟನೆಗೆ ಕಾಂಚೀ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿಯನ್ನು ಆಹ್ವಾನಿಸಲಾಯಿತು.

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮೊಕ್ಕಾಂ ಹೂಡಿರುವ ಕಾಂಚೀ ಶ್ರೀಗಳನ್ನು ಪುತ್ತಿಗೆ ಶ್ರೀಪಾದರ ಅಪೇಕ್ಷೆ ಮೇರೆಗೆ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ವಿದ್ವಾನ್ ಪ್ರಸನ್ನಾಚಾರ್ಯ ಸಹಿತ ಅಧಿಕಾರಿಗಳು ಭೇಟಿ ಮಾಡಿ ಆಮಂತ್ರಣ ನೀಡಿದರು.

ಪುತ್ತಿಗೆ ಶ್ರೀಪಾದರ ಆಹ್ವಾನವನ್ನು ‌ಮನ್ನಿಸಿದ ಕಾಂಚೀ ಶ್ರೀಗಳು ನವೆಂಬರ್ 20ರಂದು ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಲು ಸಮ್ಮತಿಸಿದರು.

ಕಾಂಚಿ ಪೀಠದ ಈ ಹಿಂದಿನ ಯತಿಗಳಾಗಿದ್ದ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಪುತ್ತಿಗೆ ಶ್ರೀಪಾದರ ಅಪೇಕ್ಷೆಯಂತೆ ತೃತೀಯ ಪರ್ಯಾಯ ಸಂದರ್ಭದಲ್ಲಿ ನಡೆದ ನವರತ್ನರಥದ ಉದ್ಘಾಟನೆಗಾಗಿ ಉಡುಪಿಗೆ ಭೇಟಿ ನೀಡಿದ್ದನ್ನು ಸ್ಮರಿಸಬಹುದು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ