ಬಿಎಂಟಿಸಿ ಸೆಕ್ಯೂರಿಟಿ ಹಾಗೂ ವಿಜಿಲೆನ್ಸ್ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್ ವರ್ಗಾವಣೆ

ಬೆಂಗಳೂರು : ಬೆಂಗಳೂರಿನ ಸಿಟಿ ಕ್ರೈಂ ಬ್ರ್ಯಾಂಚ್ ಡಿಸಿಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್ ಅವರನ್ನು ಬಿಎಂಟಿಸಿ ಸುರಕ್ಷತೆ ಹಾಗೂ ಜಾಗೃತ ವಿಭಾಗದ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಈ ಹಿಂದೆ, ಕರಾವಳಿ ಕಾವಲು ಪಡೆಯ ಎಸ್ಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್ ಅವರನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಿಸಿಬಿ ಡಿಸಿಪಿ‌ಯಾಗಿ ವರ್ಗಾಯಿಸಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರಾದ ಅವರು ಈ ಹಿಂದೆ ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿಯಾಗಿ, ಭ್ರಷ್ಟಾಚಾರ ನಿಗ್ರಹ ದಳ ಎಸಿಬಿ ಯ ಬೆಂಗಳೂರು ಎಸ್ಪಿಯಾಗಿ, ಸಿ ಐ ಡಿ ಯಲ್ಲಿ ಆರ್ಥಿಕ ಅಪರಾಧಗಳ ವಿಭಾಗದ ಎಸ್ಪಿಯಾಗಿ ಹಾಗೂ ಕೆ ಎಸ್ ಆರ್ ಪಿ ಯಲ್ಲಿ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ