ದೇಶಪ್ರೇಮ ಬೆಳೆಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ – ಡಾ. ಎಚ್ ಎಸ್ ಬಲ್ಲಾಳ್

ಮಣಿಪಾಲ : ‘ದೇಶ ಪ್ರೇಮ ಎಲ್ಲರಲ್ಲಿ ಎಳವೆಯಿಂದಲೇ ಬೆಳೆಯಬೇಕು. ದೇಶದ ಬಗೆಗೆ ಪ್ರೇಮವನ್ನು ಹೊಂದಿದಾಗ ಮಾತ್ರ ಸಶಕ್ತ ಭಾರತದ ನಿರ್ಮಾಣ ಸಾಧ್ಯ. ಈ ಹಿನ್ನಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸುವ ಉದ್ದೇಶದಿಂದ ರೇಡಿಯೋ ಮಣಿಪಾಲ್‌ನಲ್ಲಿ ಆಯೋಜಿಸಲಾದ ದೇಶಭಕ್ತಿಗೀತೆ ಸಮೂಹ ಗಾಯನ ಸ್ಪರ್ಧಾ ಕಾರ್ಯಕ್ರಮ ಅಭಿನಂದನೀಯ’ ಎಂದು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇದರ ಸಹ ಕುಲಾಧಿಪತಿ ಡಾ. ಎಚ್ ಎಸ್ ಬಲ್ಲಾಳ್ ಹೇಳಿದರು.

ಅವರು ಮಣಿಪಾಲ್ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮತ್ತು ಮಣಿಪಾಲ್ ಇನ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಹಯೋಗದಲ್ಲಿ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರವು ಸ್ವಾತಂತ್ರೋತ್ಸವದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಉಡುಪಿ ಜಿಲ್ಲಾ ಮಟ್ಟದ ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಉಡುಪಿಯ ಜಿಲ್ಲೆಯ ಒಟ್ಟು ಹನ್ನೊಂದು ಪ್ರೌಢಶಾಲಾ ವಿದ್ಯಾರ್ಥಿ ತಂಡಗಳು ಸ್ಪರ್ಧೆಲ್ಲಿ ಭಾಗವಹಿಸಿದ್ದವು. ಪ್ರಥಮ ಬಹುಮಾನವನ್ನು ಮಾಧವ ಕೃಪಾ ಆಂಗ್ಲ ಮಾದ್ಯಮ ಶಾಲೆ ಮಣಿಪಾಲ್, ದ್ವಿತೀಯ ಬಹುಮಾನವನ್ನು ಟಿ. ಎ. ಪೈ. ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ಕುಂಜಿಬೆಟ್ಟು, ತೃತೀಯ ಬಹುಮಾನವನ್ನು ಜ್ಙಾನಸುಧಾ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಾರ್ಕಳ ಪಡೆದರು. ಸಮಾಧಾನಕಾರ ಬಹುಮಾನವನ್ನು ಸೈಂಟ್ ಫ್ರಾನ್ಸೀಸ್ ಝೇವಿಯರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉದ್ಯಾವರ ಮತ್ತು ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್ ಹಿರಿಯಡಕ ತಂಡ ಪಡೆದುಕೊಂಡಿತು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ