ವಿಧಾನ ಪರಿಷತ್ ಚುನಾವಣೆ ಅವಿರೋಧವಾಗಿ ಆಯ್ಕೆಯಾದ ಐವನ್ ಡಿಸೋಜಾ

ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೇಸ್‌ನಿಂದ ಐವನ್ ಡಿಸೋಜಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರೊಂದಿಗೆ ಮೂರು ರಾಜಕೀಯ ಪಕ್ಷಗಳ ಒಟ್ಟು 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ನಾಮಪತ್ರ ವಾಪಸ್‌ ಪಡೆಯಲು ಗುರುವಾರ ಮಧ್ಯಾಹ್ನ 3ರವರೆಗೆ ಕಾಲಾವಕಾಶವಿತ್ತು. ಯಾರೂ ನಾಮಪತ್ರ ಹಿಂದಕ್ಕೆ ಪಡೆಯದ ಕಾರಣ, ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಘೋಷಿಸಿದರು.

ಕಾಂಗ್ರೆಸ್‌ನ ಎನ್.ಎಸ್. ಬೋಸರಾಜು, ಐವನ್‌ ಡಿಸೋಜ, ಕೆ.ಗೋವಿಂದರಾಜ್‌, ಜಗದೇವ ಗುತ್ತೇದಾರ್, ಡಾ.ಯತೀಂದ್ರ, ಎ. ವಸಂತಕುಮಾರ್‌, ಬಿಲ್ಕಿಸ್‌ ಭಾನು, ಬಿಜೆಪಿಯ ಸಿ.ಟಿ. ರವಿ, ಎನ್‌. ರವಿಕುಮಾರ್‌ ಮತ್ತು ಎಂ.ಜಿ. ಮುಳೆ, ಜೆಡಿಎಸ್‌ನಿಂದ ಟಿ.ಎನ್‌. ಜವರಾಯಿಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !