ಜಿಲ್ಲಾ ಕಾರಗೃಹ‌ದಲ್ಲಿ ಗರುಡ ಗ್ಯಾಂಗ್‌ವಾರ್ ಆರೋಪಿಗಳಿಂದ ಜೈಲು ಅಧೀಕ್ಷಕರು, ಸಿಬ್ಬಂದಿ ಮೇಲೆ ಹಲ್ಲೆ : ಪ್ರಕರಣ ದಾಖಲು

ಹಿರಿಯಡ್ಕ : ಉಡುಪಿ ಗ್ಯಾಂಗ್‌ವಾರ್ ಆರೋಪಿಗಳಿಬ್ಬರು ಹಿರಿಯಡ್ಕ ಕಾಜರಗುತ್ತು ಎಂಬಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆ ಯತ್ನಿಸಿರುವ ಘಟನೆ ಜೂ.24ರಂದು ನಡೆದಿದೆ.

ಉಡುಪಿ ಜಿಲ್ಲೆಯಲ್ಲಿ ಅತಂಕ‌ ಸೃಷ್ಟಿಸಿದ್ದ ಗ್ಯಾಂಗ್‌ವಾರ್ ಅರೋಪಿಗಳು ಕಾರಗೃಹ‌ದ ಅಡುಗೆ ಮನೆಯಲ್ಲಿದ್ದ ಚಹಾ ಸೌಟು ಪಾತ್ರೆಗಳಿಂದ ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಕಾರಾಗೃಹದಲ್ಲಿರುವ ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೇನ್, ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ಹೇಳಿ ಕರ್ತವ್ಯದಲ್ಲಿದ್ದ ಜೈಲರ್ ಎಸ್.ಎ. ಶಿರೋಳ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿ ಜೋರಾಗಿ ಕೂಗಾಡಿದ್ದಾರೆ. ಅಲ್ಲದೆ ಅಧೀಕ್ಷಕರ ಕಚೇರಿಯಿಂದ ಕರೆದುಕೊಂಡು ಹೋಗುವಾಗ ಸಿಬ್ಬಂದಿಯೊಂದಿಗೆ ಮತ್ತೆ ಗಲಾಟೆ ಅರಂಭಿಸಿ ಸಿಬ್ಬಂದಿಯನ್ನು ತಳ್ಳಿ ಕೊಠಡಿಯಲ್ಲಿದ್ದ ಬೆಂಕಿ ನಂದಿಸುವ ಯಂತ್ರವನ್ನು ತೆಗೆಯಲು ಪ್ರಯತ್ನಿಸಿದರೆನ್ನಲಾಗಿದೆ.

ಬಳಿಕ ಅಡುಗೆ ಕೋಣೆಯಲ್ಲಿರುವ ದೊಡ್ಡ ಸೌಟನ್ನು ಮತ್ತು ಚಹಾ ಮಾಡುವ ಸೌಟನ್ನು ತಂದು, ಮುಹಮ್ಮದ್ ಸಕ್ಲೇನ್ ತನ್ನ ಕೊಠಡಿಯ ಮರದ ಕುರ್ಚಿಯನ್ನು ತೆಗೆದುಕೊಂಡು ಸಿಬ್ಬಂದಿಗೆ ಹಲ್ಲೆ ಮಾಡಲು ಪ್ರಯತ್ನಿಸಿದ್ದನೆಂದು ದೂರಲಾಗಿದೆ.

ಕರ್ತವ್ಯದಲ್ಲಿದ್ದ ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ಧರಾಮ ಬಿ.ಪಾಟೀಲ್ ಹಾಗೂ ಸಿಬ್ಬಂದಿಗೆ ಹಲ್ಲೆ ಮಾಡಲು ಪ್ರಯತಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದಾಗಿ ದೂರಲಾಗಿದೆ. ಅದರಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೋಟತಟ್ಟುವಿನಲ್ಲಿ ಹೆಜ್ಜೇನು ದಾಳಿ : ಇಬ್ಬರ ಸ್ಥಿತಿ ಗಂಭೀರ

ಬಾಕಿ ಇರುವ ಮನೆಹಾನಿ, ಬೆಳೆಹಾನಿ ಪರಿಹಾರ ತಕ್ಷಣ ವಿತರಿಸಿ – ಅಧಿಕಾರಿಗಳಿಗೆ ಎಡಿಸಿ ಸೂಚನೆ

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್