ಅಕ್ರಮ ಬಾಂಗ್ಲಾ ವಲಸಿಗರಿಗೆ ನ್ಯಾಯಾಂಗ ಬಂಧನ

ಉಡುಪಿ : ಮಲ್ಪೆ ಸಹಿತ ವಿವಿಧ ಕಡೆಗಳಲ್ಲಿ ಬಂಧಿತರಾಗಿ ಪೊಲೀಸ್‌ ಕಸ್ಟಡಿಯಲ್ಲಿದ್ದವರು ಸಹಿತ ಒಟ್ಟು ಎಂಟು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅ.12ರಂದು ಮಲ್ಪೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಹಕೀಂ ಅಲಿ, ಸುಜೋನ್‌ ಎಸ್‌.ಕೆ. ಫಾರೂಕ್‌, ಇಸ್ಮಾಯಿಲ್‌ ಎಸ್‌.ಕೆ., ಕರೀಂ ಎಸ್‌.ಕೆ., ಸಲಾಂ ಎಸ್‌.ಕೆ., ರಾಜಿಕುಲ್‌ ಎಸ್‌.ಕೆ. ಅವರನ್ನು ಪೊಲೀಸರು ಬಂಧಿಸಿದ್ದರು.

ಇವರನ್ನು ಅ.14ರಂದು ಪೊಲೀಸರು ಐದು ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ಮಾಡಿದ್ದರು. ಇವರು ನೀಡಿದ ಮಾಹಿತಿ ನೆಲೆಯಲ್ಲಿ ಕಾರ್ಕಳದಲ್ಲಿ ಅ.17ರಂದು ಮತ್ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಕಾರ್ಕಳದಲ್ಲಿ ಮುಹಮ್ಮದ್‌ ಇಮಾಂ ಶೇಖ್‌ ಹಾಗೂ ಮುಹಮ್ಮದ್‌ ರಿಮುಲ್‌ ಇಸ್ಲಾಮ್‌ ಅವರನ್ನು ಹಾಗೂ ಅ.18ರಂದು ಸಂತೆಕಟ್ಟೆಯಲ್ಲಿ ಮುಹಮ್ಮದ್‌ ಜಹಾಂಗೀರ್‌ ಆಲಂ ಎಂಬಾತನನ್ನು ಬಂಧಿಸಲಾಗಿತ್ತು.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ